

ಸುಂಟಿಕೊಪ್ಪ: ಚಿಕ್ಕಬಳ್ಳಾಪುರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ 17 ವರ್ಷದ ವಯೋಮಿತಿಯ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಸಂತ ಮೇರಿಸ್ ಆಂಗ್ಲ ಮಾಧ್ಯಮ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಜೀವಿಕಾ ಪ್ರಥಮ ಸ್ಥಾನ ಪಡೆಯುವ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ.
ಜೀವಿಕಾ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ನೈಜ ಅವಕಾಶವನ್ನು ಪಡೆಯುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಜೀವಿಕಾ ಅವರ ತಂದೆ ರಾಜ್ ಕುಮಾರ್ ಅವರು ಭಾರತೀಯ ಸೇನೆಯಲ್ಲಿ ಯೋಧರಾಗಿದ್ದು, ತಾಯಿ ಲಕ್ಷ್ಮೀ ಮಡಿಕೇರಿ ಸರ್ಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ಶುಶ್ರೂಷಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇದೇ ರೀತಿ 10ನೇ ತರಗತಿಯ ವಿದ್ಯಾರ್ಥಿ ದಿಗಂತ್ ಹಾಗೂ 8ನೇ ತರಗತಿಯ ಸಾತ್ವಿಕ್ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿರುತ್ತಾರೆ. 8ನೇ ತರಗತಿ ವಿದ್ಯಾರ್ಥಿ ಮನೀಶ್ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.
ವಿದ್ಯಾರ್ಥಿಗಳಿಗೆ ಕರಾಟೆ ಮುಖ್ಯ ತರಬೇತುದಾರರಾದ ಎ.ಮುಕೇಶ್, ಸಹ ತರಬೇತುದಾರ ಅಕ್ಷಯ್ ಹಾಗೂ ಅಂಕಿತ್ ತರಬೇತಿ ನೀಡಿದ್ದಾರೆ. ಸಂತ ಮೇರೀಸ್ ಸಂಸ್ಥೆಗಳ ವ್ಯವಸ್ಥಾಪಕ ರೆ. ಫಾ. ವಿಜಯ್ ಕುಮಾರ್, ಮುಖ್ಯಶಿಕ್ಷಕರಾದ ಸೆಲ್ವರಾಜು ಹಾಗೂ ಎಲ್ಲ ಶಿಕ್ಷಕರು ಹಾಗೂ ಸಿಬ್ಬಂದಿ ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.