ನುಡಿದಂತೆ ನಡೆದ ಸಿಎಂ ಅಂದ್ರೆ ಅದು ಸಿದ್ದರಾಮಯ್ಯ: ಶಾಸಕ ಎಸ್.ಟಿ. ಸೋಮಶೇಖರ್

siddaramaiah and st somashekar
Published on

ಬೆಂಗಳೂರು: ಇಂದು ಕಾಗಿನೆಲೆ ಶಾಖಾ ಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುರಿತು ಶಾಸಕ ಎಸ್.ಟಿ. ಸೋಮಶೇಖರ್ ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ.

ಕಾರ್ಯಕ್ರಮದ ವೇದಿಕೆಯಲ್ಲಿ ಭಾಷಣ ಮಾಡಿದ ಎಸ್.ಟಿ. ಸೋಮಶೇಖರ್, 2013-18 ರವರಗೆ ಸಿದ್ದರಾಮಯ್ಯ ನಮಗೆ ಸಿಎಂ ಆಗಿದ್ದರು. ನನ್ನ ಕ್ಷೇತ್ರದ ಅಭಿವೃದ್ಧಿಗೆ ಅನುಧಾನ ನೀಡಿದ್ದರು. 2018 ರಲ್ಲಿ ಸಿದ್ದರಾಮಯ್ಯ ಅವರ ಪ್ರೋತ್ಸಾಹದಿಂದ ನಾನು ಶಾಸಕನಾದೆ. ನುಡಿದಂತೆ ನಡೆದ ಸಿಎಂ ಎಂದರೆ ಅದು ಸಿದ್ದರಾಮಯ್ಯನವರು. ಬಾಯಲ್ಲಿ ಹೇಳಿದ್ದನ್ನು ಮಾಡಿ ತೋರಿಸುತ್ತಾರೆ. ರಾಜ್ಯದ ಜನರ ನಾಡಿಮಿಡಿತ ಸಿದ್ದರಾಮಯ್ಯ ಅವರಿಗೆ ಸ್ಪಷ್ಟವಾಗಿ ತಿಳಿದಿದೆ ಎಂದು ಮೆಚ್ಚಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಿಎಂ ಹಾಗೂ ಶಾಸಕ ಎಸ್.ಟಿ. ಸೋಮಶೇಖರ್ ಆತ್ಮೀಯವಾಗಿ ಮಾತುಕತೆ ನಡೆಸಿದ್ದು, ಸೋಮಶೇಖರ್ ಹೆಗಲ ಮೇಲೆ ಸಿದ್ದರಾಮಯ್ಯ ಕೈ ಹಾಕಿಕೊಂಡು ಮಾತನಾಡಿಸಿರುವುದು ಇದೀಗ ರಾಜಕೀಯ ವಲಯದಲ್ಲಿ ಗೊಂದಲ ಸೃಷ್ಟಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net