

ಬೆಂಗಳೂರು:
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಶಿಯೇಷನ್ (ಕೆಎಸ್‌ಸಿಎ) ನಿರ್ಮಾಣ ಮಾಡಿರುವ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮಳೆಗಾಲದಲ್ಲಿ ನೀರು ಹರಿದುಬಂದು ಸಂಪೂರ್ಣ ಜಲಮಯವಾಗುತ್ತಿರುವ ಹಿನ್ನೆಲೆಯಲ್ಲಿ ಅವುಗಳ ದುರಸ್ತಿಗೆ ಆದ್ಯತೆ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಕೆ ರಾಥೋಡ್ ಒತ್ತಾಯಿಸಿದ್ದಾರೆ.
ಶಿವಮೊಗ್ಗದಲ್ಲಿ 26 ಎಕರೆ ಜಾಗದಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ ಮಾಡಲಾಗಿದೆ. ಚಿಕ್ಕಮಗಳೂರು, ಹಾಸನ ಮತ್ತು ಶಿವಮೊಗ್ಗ ಸೇರಿದಂತೆ 45 ಕ್ಲಬ್‌ಗಳಿದ್ದು, 2009ರಿಂದ ಸುಮಾರು 400ಕ್ಕೂ ಹೆಚ್ಚು ಕ್ರಿಕೆಟ್ ಆಡಿಸಲಾಗುತ್ತಿದೆ. 5 ಕೋಟಿ ವೆಚ್ಚದಲ್ಲಿ ಕ್ರೀಡಾಂಗಣ ನಿರ್ಮಾಣವಾಗಿದ್ದರೂ, ಅಲ್ಲಿಗೆ ಮಳೆ ನೀರು ನಿರ್ಬಂಧಿಸುವ ನಿಟ್ಟಿನಲ್ಲಿ ಸರಿಯಾದ ಕ್ರಮ ಆಗಿಲ್ಲ. ಆದ್ದರಿಂದ ಈ ಬಗ್ಗೆ ಶೀಘ್ರವೇ ಕ್ರಮ ವಹಿಸಬೇಕು ಎಂದು ಅವರು ವಿನಂತಿಸಿಕೊಂಡಿದ್ದಾರೆ.