

ಚೆನೈ: ಕೇಂದ್ರ ಮೀಸಲು ಪಡೆ(CRPF)ಗೆ ನಡೆಸುವ ಪ್ರವೇಶಾತಿ ಪರೀಕ್ಷೆಯಲ್ಲಿ ಹಿಂದಿಯೇತರ ರಾಜ್ಯಗಳಲ್ಲಿರುವ ಅಭ್ಯರ್ಥಿಗಳಿಗೆ ಮಾತೃ ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕೆಂದು ಆಗ್ರಹಿಸಿ ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಸ್ಟಾಲಿನ್ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಪತ್ರ ಬರೆದಿರುವ ಕುರಿತು ಭಾನುವಾರ ತಮಿಳುನಾಡು ಸರ್ಕಾರ ಪ್ರಕಟಿಸಿದೆ.
ಕೇಂದ್ರ ಸರ್ಕಾರ ನಡೆಸುವ CRPF ಪರೀಕ್ಷೆಯೂ ಹಿಂದಿ ಹಾಗೂ ಇಂಗ್ಲೀಷ್ನಲ್ಲಿ ಭಅಷೆಗಳಲ್ಲಿ ನಡೆಯುತ್ತಿದ್ದು ಇದರಿಂದ ಪ್ರಾದೇಶಿಕ ಭಾಷೆಗಳ ರಾಜ್ಯಗಳಿಂದ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ತೊಂದರೆಯಾಗುತ್ತದೆ. ಅಭ್ಯರ್ಥಿಗಳು ವಾಸಿಸುವ ಆಯಾ ರಾಜ್ಯದ ಪ್ರಧಾನ ಭಾಷೆ ಅಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕೆಂದು ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: ಪೂಂಚ್ನಲ್ಲಿ ಒಳನುಸುಳುವಿಕೆ ಯತ್ನ; ಓರ್ವ ಭಯೋತ್ಪಾದಕನ ಹತ್ಯೆ
CRPF ಪ್ರಶ್ನೆ ಪತ್ರಿಕೆಯಲ್ಲಿ 25 ಅಂಕಗಳಿಗೆ ಹಿಂದಿ ಗ್ರಹಿಕೆ ಕುರಿತು ಪ್ರಶ್ನೆ ಇದ್ದು ಇದರಿಂದ ಹಿಂದಿ ಮಾತನಾಡುವ ವಿದ್ಯಾರ್ಥಿಗಳಿಗೆ ಹೆಚ್ಚು ಪ್ರಯೋಜನವಾಗುತ್ತಿದೆ ಎಂದು ಸ್ಟಾಲಿನ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.
CRPF ಪರೀಕ್ಷೆಯನ್ನು ಹಿಂದಿ-ಇಂಗ್ಲೀಷ್ನಲ್ಲಿ ನಡೆಸುತ್ತಿರುವ ಕಾರಣ ಉದ್ಯೋಗ ಆಕಾಂಕ್ಷಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಹಿಂದಿಯೇತರ ಭಾಷಿಕರು ತಮ್ಮ ಸ್ತಳೀಯ ಭಅಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಬೇಕು. ಈ ಕೂಡಲೇ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಧ್ಯಪ್ರವೇಶಿಸಬೇಕು ಎಂದು ಸ್ಟಾಲಿನ್ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.