ಕಾಲ್ತುಳಿತ ಪ್ರಕರಣ; ಜೈಲಿನಿಂದ ನಟ Allu Arjun ರಿಲೀಸ್​

Allu Arjun Release
Published on

ಹೈದರಾಬಾದ್​: ಡಿಸೆಂಬರ್​ 04ರಂದು ಹೈದರಾಬಾದಿನ ಸಂಧ್ಯಾ ಥಿಯೇಟರ್​ನಲ್ಲಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಅಲ್ಲು ಅರ್ಜುನ್​ಗೆ (Allu Arjun) ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಶನಿವಾರ (ಡಿಸೆಂಬರ್​ 14) ಮುಂಜಾನೆ ಚಂಚಲಗೂಡ ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಶುಕ್ರವಾರ (ಡಿಸೆಂಬರ್​​ 13) ಮಧ್ಯರಾತ್ರಿಯವರೆಗೂ ಅಲ್ಲು ಅರ್ಜುನ್​ (Allu Arjun) ಬಿಡುಗಡೆಯ ಪ್ರಕ್ರಿಯೆ ಮುಂದುವರೆದಿತ್ತು. ರಾತ್ರಿ 10.30ಕ್ಕೆ ಸೂಕ್ತ ದಾಖಲೆಗಳನ್ನು ಜೈಲು ಅಧಿಕಾರಿಗಳು ಸ್ವೀಕರಿಸಿದರು. ನಂತರ ಪ್ರಕ್ರಿಯೆಗಳು ಮುಗಿದ ಬಳಿಕ ಅವರು ಇಂದು (ಡಿಸೆಂಬರ್​ 14) ಬೆಳಗ್ಗೆ ಜೈಲಿನಿಂದ ಹೊರಬಂದಿದ್ದಾರೆ.

ಶುಕ್ರವಾರ (ಡಿಸೆಂಬರ್​ 13) ನಡೆದ ನಾಟಕೀಯ ಬೆಳವಣಿಗೆಯಲ್ಲಿ ನಟ ಅಲ್ಲು ಅರ್ಜುನ್​ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ ಬಳಿಕ ಚಿಕ್ಕಡಪಲ್ಲಿ ಠಾಣೆಯ ಪೊಲೀಸರು ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿದ್ದು, ಕೋರ್ಟ್ ಅವರಿಗೆ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ನಂತರ ಅವರನ್ನು ಚಂಚಲಗುಡ ಜೈಲಿಗೆ ಕರೆತರಲಾಗಿತ್ತು. ಬಳಿಕ, ತೆಲಂಗಾಣ ಹೈಕೋರ್ಟ್ ಸಂಜೆಯ ಹೊತ್ತಿಗೆ ನಾಲ್ಕು ವಾರಗಳ ಮಧ್ಯಂತರ ಜಾಮೀನನ್ನು ಮಂಜೂರು ಮಾಡಿತು.

ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದ ನಟ ಅಲ್ಲು ಅರ್ಜುನ್​ ವಿಷಾದ ವ್ಯಕ್ತಪಡಿಸಿ ಮೃತ ಮಹಿಳೆ ಕುಟುಂಬಕ್ಕೆ 25 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಇದಲ್ಲದೆ ಮಕ್ಕಳ ಶಿಕ್ಷಣ ಸೇರಿದಂತೆ ಆರ್ಥಿಕ ಸಹಾಯವನ್ನು ಮಾಡುವುದಾಗಿಯೂ ನಟ ವಿಡಿಯೋ ಸಂದೇಶದ ಮೂಲಕ ತಿಳಿಸಿದ್ದರು. ಆದರೆ, ಘಟನೆ ಸಂಬಂಧ ಚೀಕಡಪಲ್ಲಿ ಪೊಲೀಸರು ನಟ ಅಲ್ಲು ಅರ್ಜುನ್​ರನ್ನು (Allu Arjun) ಪೊಲೀಸರು ಬಂಧಿಸಿದ್ದಾರೆ.

https://www.vijayavani.net/who-will-captain-royal-challengers-bengaluru-next-season-except-virat-kohli

https://www.vijayavani.net/pavithra-gowdas-daughter-post-goes-viral-in-social-media-after-mother-gets-bail-in-murder-case

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net