ವಿಜಯ್​ ರ‍್ಯಾಲಿ ವೇಳೆ ಕಾಲ್ತುಳಿತ ಪ್ರಕರಣ: ಸಿಬಿಐ ತನಿಖೆಗೆ ಆದೇಶಿಸಿದ ಸುಪ್ರೀಂಕೋರ್ಟ್ | Stampede Case

Untitled design - 2025-10-13T120407.432 (1)
Published on

ನವದೆಹಲಿ: ನಟ ವಿಜಯ್ ಅವರ ರಾಜಕೀಯ ಪಕ್ಷವಾದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ರ್ಯಾಲಿಯ ಸಂದರ್ಭದಲ್ಲಿ(ಸೆಪ್ಟೆಂಬರ್ 27 ರಂದು) ನಡೆದ ಕಾಲ್ತುಳಿತದ(Stampede Case) ಘಟನೆಯಲ್ಲಿ 41 ಜನರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಇಂದು (ಅ.13) ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆಗೆ ಆದೇಶಿಸಿದೆ ಎಂದು ಲೈವ್​ಲಾ ವರದಿ ಮಾಡಿದೆ.

ನಟ ವಿಜಯ್ ಅವರ ರಾಜಕೀಯ ಪಕ್ಷ ಟಿವಿಕೆ ಮತ್ತು ಇತರರು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಾಲಯ ಇದೀಗ ಈ ಮಧ್ಯಂತರ ಆದೇಶ ನೀಡಿದೆ.

"ಈ ವಿಷಯಗಳು ನಾಗರಿಕರ ಮೂಲಭೂತ ಹಕ್ಕುಗಳ ಮೇಲೆ ಪರಿಣಾಮ ಬೀರುತ್ತವೆ ಮತ್ತು ರಾಷ್ಟ್ರೀಯ ಆತ್ಮಸಾಕ್ಷಿಯನ್ನು ಅಲುಗಾಡಿಸಿದ ಘಟನೆಯು ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಗೆ ಅರ್ಹವಾಗಿದೆ. ಆದ್ದರಿಂದ, ಮಧ್ಯಂತರ ಕ್ರಮವಾಗಿ, ವಿಷಯದ ನ್ಯಾಯಯುತ ತನಿಖೆಯ ದೃಷ್ಟಿಯಿಂದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ನಿರ್ದೇಶನವನ್ನು ನೀಡುವುದು ಯೋಗ್ಯವಾಗಿದೆ'' ಎಂದು ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರನ್ನೊಳಗೊಂಡ ಪೀಠ ಹೇಳಿದೆ.

ತನಿಖೆಯ ನಿಷ್ಪಕ್ಷಪಾತತೆಯ ಬಗ್ಗೆ ಪಕ್ಷಗಳ ಕಳವಳಗಳನ್ನು ನಿವಾರಿಸಲು, ನ್ಯಾಯಾಲಯವು ಸಿಬಿಐ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ಮಾಜಿ ಸುಪ್ರೀಂ ಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಅಜಯ್ ರಸ್ತೋಗಿ ನೇತೃತ್ವದಲ್ಲಿ 3 ಸದಸ್ಯರ ಮೇಲ್ವಿಚಾರಣಾ ಸಮಿತಿಯನ್ನು ರಚಿಸಿತು.

ಘಟನೆ ಏನು?

ತಮಿಳುನಾಡಿನ ಕರೂರಿನಲ್ಲಿ ನಟ ದಳಪತಿ ವಿಜಯ್ ಅವರು ರಾಜಕೀಯ ರ್‍ಯಾಲಿ ನಡೆಸುವ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತ(ಸೆಪ್ಟೆಂಬರ್ 27 ರಂದು) ದುರಂತದಲ್ಲಿ 41 ಮಂದಿ ದಾರುಣ ಅಂತ್ಯ ಕಂಡಿದ್ದು, 50ಕ್ಕೂ ಹೆಚ್ಚು ಜನರ ಸ್ಥಿತಿ ಗಾಯಗೊಂಡಿದ್ದರು.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net