ಕಾಲ್ತುಳಿತ ದುರಂತ: ನನ್ನ ಹೃದಯ ಛಿದ್ರವಾಗಿದೆ... ಘಟನೆ ಬಳಿಕ ಫಸ್ಟ್​​ ರಿಯಾಕ್ಷನ್​​ ಕೊಟ್ಟ ವಿಜಯ್​

Untitled design - 2025-09-27T233818.093
Published on

ಕರೂರಿನಲ್ಲಿ ನಡೆದ ತಮ್ಮ ರ್ಯಾಲಿಯಲ್ಲಿ ಸಂಭವಿಸಿದ ದುರಂತ ಕಾಲ್ತುಳಿತದ ಬಗ್ಗೆ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ಮತ್ತು ನಟ ವಿಜಯ್ ಅವರು ಮೊದಲ ಬಾರಿಗೆ ಸಾರ್ವಜನಿಕ ಹೇಳಿಕೆ ನೀಡಿದ್ದು, ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

"ನನ್ನ ಹೃದಯ ಛಿದ್ರವಾಗಿದೆ; ಪದಗಳಲ್ಲಿ ವ್ಯಕ್ತಪಡಿಸಲಾಗದ ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿ ನಾನು ನರಳುತ್ತಿದ್ದೇನೆ" ಎಂದು ವಿಜಯ್​ ಹೇಳಿದ್ದಾರೆ.

"ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಮತ್ತು ಸಹಾನುಭೂತಿಯನ್ನು ವ್ಯಕ್ತಪಡಿಸುತ್ತೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ನಾನು ಪ್ರಾರ್ಥಿಸುತ್ತೇನೆ."

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net