ಗಡಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿ ಬೆಳಗಾವಿಯಲ್ಲಿ ಆರಂಭಿಸಿ; ಸಿಎಂಗೆ ಪತ್ರ |Start at Regional Office of Border Authority in Belgaum; Letter to CM

Somanna Bevinamarad
Published on

ಬೆಳಗಾವಿ: ಗಡಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿಯನ್ನು ಬೆಳಗಾವಿ ಸುವರ್ಣಸೌಧದಲ್ಲಿ ತೆರೆಯುವುದು(Start at Regional Office of Border Authority in Belgaum; Letter to CM)ಸೇರಿದಂತೆ ಎಂಟು ನಿರ್ಣಯಗಳನ್ನು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಸಭೆ ತೆಗೆದುಕೊಂಡಿದೆ.

ಬೆಳಗಾವಿಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಅದ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ.

ಕರ್ನಾಟಕ, ಗೋವಾ, ಆಂಧ್ರಪ್ರದೇಶ ಹಾಗೂ ಕನ್ನಡ ಭಾಷೆಗೆ ಸಂಬಂಧಿಸಿದಂತೆ ಇರುವ ಸಮಸ್ಯೆಗಳು ಹಾಗೂ ಸರ್ಕಾರದಿಂದ ಆಗಬೇಕಾದ ಪರಿಹಾರೋಪಾಯಗಳ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಗಿದೆ. ಚರ್ಚೆಯ ಬಳಿಕ ಎಂಟು ಪ್ರಮುಖ ನಿರ್ಣಯಗಳನ್ನು ಕೈಗೊಂಡು ಅವುಗಳನ್ನು ಜಾರಿಗೊಳಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಅಧ್ಯಕ್ಷ ಸೋಮಣ್ಣ ಬೇವಿನ(Somanna Bevinamard) ಮರದ ಪತ್ರ ಬರೆದಿದ್ದಾರೆ.

ಸಭೆಯಲ್ಲಿ ಮಹಾರಾಷ್ಟ್ರ ಗಡಿಗೆ ಸಂಬಂಧಿಸಿದಂತೆ 17, ಆಂಧ್ರಪ್ರದೇಶ, ಗೋವಾಗಳಿಗೆ ಸಂಬಂಧಿಸಿದಂತೆ ತಲಾ 1, ಕನ್ನಡ ಭಾಷೆ ಕುರಿತು 4 ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಿ ಎಂಟು ಪ್ರಮುಖ ಸಮಸ್ಯೆಗಳನ್ನು ಪಟ್ಟಿ ಮಾಡಿ ಪರಿಹಾರ ಕೋರಿ ಮುಖ್ಯಮಂತ್ರಿಗೆ ಪತ್ರ ಬರೆಯಲಾಗಿದೆ.

ಪ್ರಾಧಿಕಾರದ ಪ್ರಮುಖ ನಿರ್ಣಯಗಳು:

* ಬೆಳಗಾವಿ ಗಡಿ ಭಾಗದ ಸಾರ್ವಜನಿಕ ಕುಂದುಕೊರತೆ ಆಲಿಸಲು

ಗಡಿ ಪ್ರಾಧಿಕಾರದ ಪ್ರಾದೇಶಿಕ ಕಚೇರಿಯನ್ನು ಬೆಳಗಾವಿಯ ಸುವರ್ಣಸೌಧದಲ್ಲಿ ತೆರೆಯಬೇಕು.

* ಗಡಿ ಪ್ರಾಧಿಕಾರಕ್ಕೆ ಈ ವರ್ಷ ಹೆಚ್ಚುವರಿ 50 ಕೋಟಿ ಅನುದಾನವನ್ನು ಪೂರಕ ಬಜೆಟ್‌ನಲ್ಲಿ ಒದಗಿಸಬೇಕು.

* ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವನ್ನು ಆಡಳಿತ ಸುಧಾರಣಾ ಆಯೋಗದ ವರದಿಯಂತೆ ಯೋಜನಾ ಇಲಾಖೆಯ ಆಡಳಿತ ವ್ಯಾಪ್ತಿಗೆ ತರಬೇಕು.

* ಮಹಾರಾಷ್ಟ್ರ ಕನ್ನಡ ಶಾಲೆಗಳಲ್ಲಿ ಮರಾಠಿ ಶಿಕ್ಷಕರ ನೇಮಕಾತಿ ಮಾಡಿರುವ ಬಗ್ಗೆ ಅಲ್ಲಿನ ಸರ್ಕಾರಕ್ಕೆ ಪತ್ರ ಬರೆಯಬೇಕು.

* ಮಹಾರಾಷ್ಟ್ರ ಕನ್ನಡಿಗರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಬೇಕು.

* ಬೆಳಗಾವಿಯನ್ನು ಮಹಾರಾಷ್ಟ್ರ ಸರ್ಕಾರಕ್ಕೆ ಸೇರಿಸುವ ಮಹಾರಾಷ್ಟ್ರದ ರಾಜಕೀಯ ನಾಯಕರ ಹೇಳಿಕೆಗೆ ಖಂಡನಾ ನಿರ್ಣಯವನ್ನು ವಿಧಾನಸಭೆಯಲ್ಲಿ ಅನುಮೋದಿಸಬೇಕು.

* ಹೊರ ರಾಜ್ಯದ ಗಡಿ ಕನ್ನಡಿಗರ ಸಮಸ್ಯೆಗಳ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು.

* ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಖಾಸಗಿ ನಿವೇಶನ ಖರೀದಿಸಲು ಅನುಮೋದನೆ ಮತ್ತು ಅನುದಾನ ನೀಡಬೇಕು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net