

ನವದೆಹಲಿ: ಅಕ್ಟೋಬರ್ 15ರಿಂದ ಶಾಲೆಗಳು ಕಾರ್ಯನಿರ್ವಹಿಸಲು ಕೇಂದ್ರ ಗೃಹ ಸಚಿವಾಲಯ ಅನುಮತಿ ನೀಡಿದೆ. ಆದರೆ, ಶಾಲೆಗಳ ಪುನರಾರಂಭ ಕಡ್ಡಾಯವಲ್ಲ. ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಕರೆಸಿಕೊಳ್ಳಬೇಕೋ, ಬೇಡವೋ ಎನ್ನುವುದು ಆಯಾ ಶಾಲೆಗಳ ಆಡಳಿತ ಮಂಡಳಿಗಳ ವಿವೇಚನೆಗೆ ಬಿಟ್ಟದ್ದು ಎಂದು ಕೇಂದ್ರ ಸರ್ಕಾರ ಶುಕ್ರವಾರ ಸ್ಪಷ್ಟಪಡಿಸಿದೆ.
ಪರಿಸ್ಥಿತಿ ಆಧರಿಸಿ ಶಾಲೆಗಳು ಮತ್ತು ತರಬೇತಿ ಕೇಂದ್ರಗಳನ್ನು ಅಕ್ಟೋಬರ್ 15ರ ನಂತರ ಹಂತ ಹಂತವಾಗಿ ತೆರೆಯುವುದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳ ವಿವೇಚನೆಗೆ ಬಿಟ್ಟ ವಿಚಾರ ಎಂದು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಹೇಳಿದ್ದಾರೆ.