

ನಾಪೋಕ್ಲು: ಕೊಡಗಿನ ಇಬ್ಬರು ವಿದ್ಯಾರ್ಥಿಗಳು ಸ್ಕೌಟ್ಸ್ ಆ್ಯಂಡ್ ಗೈಡ್ಸ್ ನಲ್ಲಿ ರಾಜ್ಯ ಪುರಸ್ಕಾರ ಪ್ರಶಸ್ತಿ ಪಡೆದುಕೊಂಡು ಜಿಲ್ಲೆಗೆ ಕೀರ್ತಿ ತಂದಿದ್ದಾರೆ.
10 ರಿಂದ 17 ವರ್ಷ ವಯೋಮಿತಿಯ ಸ್ಕೌಟ್‌ನಲ್ಲಿ ಪಂದಿಕಂಡ ಪಿ.ಕಾರ್ತಿಕ್ ಹಾಗೂ ಗೈಡ್‌ನಲ್ಲಿ ತೋಟಂಬೈಲು ಯಾಮಿನಿ 2024- 25ರ ಸಾಲಿನ ರಾಜ್ಯ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಮಡಿಕೇರಿಯಲ್ಲಿ ಜರುಗಿದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್.ಬೋಸರಾಜು, ಶಾಸಕ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.
ಸ್ಕೌಟ್ಸ್ ಮತ್ತು ಗೈಡ್‌ನ ಜಿಲ್ಲಾ ಪ್ರಧಾನ ಆಯುಕ್ತ ಕೆ.ಟಿ.ಬೇಬಿ ಮ್ಯಾಥ್ಯೂ, ಡಿಡಿಪಿಐ ರಂಗಧಾಮಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಅರಮೇರಿ ಎಂಎಸ್ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ಪಿ.ಕಾರ್ತಿಕ್ ಹಾಗೂ ತೋಟಂಬೈಲು ಯಾಮಿನಿ ವಿದ್ಯಾರ್ಥಿಗಳು ಕ್ಯಾಪ್ಟನ್ ಮೈತ್ರಿ ಅವರಿಂದ ತರಬೇತಿ ಹೊಂದಿದ್ದಾರೆ.