

ಬೆಂಗಳೂರು: ಸರ್ಕಾರ ಅಂಗೀಕಾರ ಮಾಡಿರುವ ಭೂ ಸುಧಾರಣಾ ಮತ್ತು ಎಪಿಎಂಸಿ ಕಾಯ್ದೆ ವಿರೋಧಿಸಿ ಇಂದು (ಸೆಪ್ಟೆಂಬರ್ 28) ರೈತಪರ ಸಂಘಟನೆಗಳು ಬಂದ್ಗೆ ಕರೆ ನೀಡಿವೆ. ಈ ಕರ್ನಾಟಕ ಬಂದ್ ನಿಮಿತ್ತ ಇಂದು ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಉಳಿದೆಲ್ಲ ಸೇವೆಗಳೂ ಸ್ಥಗಿತಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ.
ರೈತಪರ ಸಂಘಟನೆಗಳು ಕರೆ ನೀಡಿರುವ ಬಂದ್ಗೆ ದಲಿತ, ಕನ್ನಡಪರ, ಕಾರ್ಮಿಕ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿರುವ ಜತೆಗೆ ಪ್ರತಿಪಕ್ಷಗಳೂ ಸಂಪೂರ್ಣ ಬೆಂಬಲ ಘೋಷಿಸಿವೆ. ಈ ಕಾರಣದಿಂದ ಬಂದ್ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇದನ್ನೂ ಓದಿ: ಕರೊನಾ ಬುಲೆಟಿನ್.. ಇಂದು ನಿನ್ನೆಗಿಂತ ಹೆಚ್ಚು ಸೋಂಕು, ಕಡಿಮೆ ಸಾವು..
ರೈತರು ನಾಳೆ ಬೆಳಗ್ಗೆ 11 ಗಂಟೆಗೆ ಟೌನ್‌ಹಾಲ್‌ನಿಂದ ಕೆ.ಜಿ.ರಸ್ತೆ, ಮೈಸೂರ್ ಬ್ಯಾಂಕ್ ವೃತ್ತದ ಮಾರ್ಗವಾಗಿ ಫ್ರೀಡಂಪಾರ್ಕ್‌ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಿವೆ. ನಗರದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸೂಕ್ಷ್ಮಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸ್ ಕಾವಲು ಏರ್ಪಡಿಸಲಾಗಿದೆ.
ಏನೆಲ್ಲ ಸೇವೆಗಳು ಲಭ್ಯ?
ದಿನಪತ್ರಿಕೆ, ಹಾಲು, ಮೆಡಿಕಲ್, ಆಸ್ಪತ್ರೆ ಸೇವೆಗಳು, ಹೋಟೆಲ್, ರೈಲು, ವಿಮಾನ, ಮೆಟ್ರೋ, ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇವೆಗಳು.
ಏನೆಲ್ಲ ಲಭ್ಯ ಇರುವುದಿಲ್ಲ?
ಓಲಾ-ಉಬರ್, ಖಾಸಗಿ ಬಸ್, ಲಾರಿ ಸೇವೆಗಳು, ಅಂಗಡಿ ಮುಂಗಟ್ಟುಗಳು, ಮಾಲ್‌ಗಳು, ಆಟೋ, ಏರ್‌ಪೋರ್ಟ್ ಟ್ಯಾಕ್ಸಿ, ಹಣ್ಣು, ತರಕಾರಿ, ಬೀದಿ ಬದಿ ವ್ಯಾಪಾರಗಳು.