ಕೋವಿಡ್ 2ನೇ ಅಲೆ ನಿಯಂತ್ರಣಕ್ಕೆ ಅಗತ್ಯ ಕ್ರಮ: 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಆಸ್ಪತ್ರೆಗಳಲ್ಲಿ ಐಸಿಯು ಸೌಲಭ್ಯ

ICU
Published on

ಬೆಂಗಳೂರು: ಇಡೀ ವಿಶ್ವವನ್ನೇ ವ್ಯಾಪಕವಾಗಿ ಕಾಡಿದ ಕೋವಿಡ್ ನಿರ್ವಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದ ಇತರೆ ರಾಜ್ಯಗಳಿಗೆ ಮಾದರಿಯಾಗಿದ್ದು, ಈ ನಿಟ್ಟಿನಲ್ಲಿ ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ವ್ಯಾಪಕ ಸುಧಾರಣೆ ಹಾಗೂ ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ಒದಗಿಸಲಾಗಿದೆ.

ಈಗಾಗಲೇ ದೇಶದ ಕೆಲ ರಾಜ್ಯಗಳಲ್ಲಿ ಕೋವಿಡ್ 2ನೇ ಅಲೆ ಪ್ರಾರಂಭವಾಗಿದೆ. ಇದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ 2ನೇ ಅಲೆ ಹರಡದಂತೆ ತಡೆಯಲು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

ಕೋವಿಡ್ ಅವಧಿಯಲ್ಲಿ ಒದಗಿಸಿದ ಮೌಲ್ಯಯುತ ವೈದ್ಯಕೀಯ ಸೌಕರ್ಯಗಳು ವ್ಯರ್ಥವಾಗದಂತೆ 60 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ 19 ಜಿಲ್ಲಾ ಆಸ್ಪತ್ರೆಗಳಲ್ಲಿ 25 ಹಾಸಿಗೆ ಸಾಮರ್ಥ್ಯವುಳ್ಳ ಹಾಗೂ 10 ತಾಲೂಕು ಆಸ್ಪತ್ರೆಗಳಲ್ಲಿ ಆರು ಹಾಸಿಗೆ ಸಾಮರ್ಥ್ಯವುಳ್ಳ ತೀವ್ರ ನಿಗಾ ಘಟಕಗಳ (ಐಸಿಯು) ಸೌಲಭ್ಯ ಕಲ್ಪಿಸಲಾಗುವುದು.

ಕೋವಿಡ್ ಅವಧಿಯಲ್ಲಿ ಆರಂಭಿಸಲಾದ ಟೆಲಿ-ಐಸಿಯು ಸೌಲಭ್ಯಗಳನ್ನು ಬಲಪಡಿಸಿ, ವಿಶೇಷ ತಜ್ಞರ ಕೊರತೆ ನೀಗಿಸಲು ಎರಡು ಕೋಟಿ ರೂ. ಅನುದಾನ ಒದಗಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net