ಮಾರ್ಚ್ 07ಕ್ಕೆ ರಾಜ್ಯ ಬಜೆಟ್​ ಮಂಡನೆ: ಸಿಎಂ Siddaramaiah ಘೋಷಣೆ

Siddaramaiah
Published on

ಬೆಂಗಳೂರು: 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್​ 07ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಮಾರ್ಚ್​ 03ರಂದು ಉಭಯ ಸದನವನ್ನು ಉದ್ಧೇಶಿಸಿ ರಾಜ್ಯಪಾಲರು ಭಾಷಣ ಮಾಡಲಿದ್ದು, ಮಾರ್ಚ್​ 07ರಂದು ಬಜೆಟ್​ ಮಂಡಿಸಲಾಗುವುದು ಎಂದು ಹೇಳಿದ್ದಾರೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ಧೇಶಿಸಿ ಮಾತಣಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್​ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ತಿಳಿಸಿದ್ದಾರೆ.

ಇವತ್ತು ಕೂಡ ಸಭೆ ಮಾಡಿದ್ದೀನಿ. ಕರ್ನಾಟಕ ಸರ್ಕಾರ ಯಾವಾಗಲೂ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ. ಯಾವತ್ತೂ ಕೂಡ ರೈತರ ಜೊತೆ ಇರುತ್ತೇವೆ. ಕೃಷಿಕರ ಜೊತೆ ಇರುತ್ತೇವೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಧಾರ. ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಗೆ ಏನೆಲ್ಲಾ ಮಾಡಬೇಕು ಅದನ್ನ ಮಾಡುತ್ತೇವೆ, ಅವರೂ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net