

ಬೆಂಗಳೂರು: ಬಿಜೆಪಿಯ (BJP) ಸೋಲಿನ ಆತ್ಮವಲೋಕನದ ಫೈನಲ್ ರಿಸಲ್ಟ್ ಬರಲೇ ಇಲ್ಲ! ಒಬ್ಬೊಬ್ಬರದ್ದೂ ಒಂದೊಂದು ಅವಲೋಕನ ಎಂದು ಬಿಜೆಪಿ ವಿರುದ್ಧ ರಾಜ್ಯ ಕಾಂಗ್ರೆಸ್ (State Congress) ಟ್ವೀಟ್ ಮಾಡಿ ಟೀಕಿಸಿದೆ.
"ಅಕಸ್ಮಾತ್ ಗೆಲುವಾಗಿದ್ದಿದ್ದರೆ ಕ್ರೆಡಿಟ್ ಸಿಂಪಲ್ ಆಗಿರುತ್ತಿದ್ದವು, ಮೋದಿಯಿಂದ ಗೆಲುವಾಯ್ತು, ಜೋಶಿ, ಸಂತೋಷರಿಂದ ಗೆಲುವಾಯ್ತು. ಅಂತೂ ಇಂತೂ ಬಿಜೆಪಿಯ ಆತ್ಮವಲೋಕನದಲ್ಲಿ ಹಲವು ಸತ್ಯಗಳು ಹೊರಬಂದಿವೆ, ಇನ್ನೂ ಹಲವು ಹೊರಬಾರದೆ ಒದ್ದಾಡುತ್ತಿವೆ" ಎಂದು ಟ್ವೀಟ್ ಮಾಡಿ ಟೀಕಿಸಿದೆ.