

ಹಾವೇರಿ: ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಿದರೆ ಬಿಜೆಪಿ ಕಾರ್ಯಕರ್ತರ ಮೇಲೆ ಒತ್ತಡ ಹಾಕಿ ಕೇಸ್ ಹಾಕುತ್ತಿದ್ದಾರೆ. ರಾಜ್ಯದಲ್ಲಿ ಪ್ರಜಾಪ್ರಭುತ್ವ ಇಲ್ಲ. ಅಘೋಷಿತ ತುರ್ತುಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದ ಪಕ್ಷದ ಕಚೇರಿಯಲ್ಲಿ ಭಾನುವಾರ ಏರ್ಪಡಿಸಿದ್ದ ಪಕ್ಷದ 45ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
1975ರಲ್ಲಿ ರಾಷ್ಟ್ರದ ಮೇಲೆ ತುರ್ತು ಪರಿಸ್ಥಿತಿ ಹೇರಿದ್ದರಿಂದ ಯಾರಿಗೂ ಸ್ವಾತಂತ್ರ$್ಯ ಇರಲಿಲ್ಲ. ಹೀಗಾಗಿ ವಿದ್ಯಾಥಿರ್ಗಳಿಂದ ಶುರುವಾದ ಹೋರಾಟ ಸಂರ್ಪೂಣ ಕ್ರಾಂತಿಯಾಗಿ ಅಟಲ್ ಬಿಹಾರಿ ವಾಜಪೇಯಿ ಅವರ ನೇತೃತ್ವದಲ್ಲಿ ಅಡ್ವಾಣಿಯವರು ಎಲ್ಲರೂ ನುಗ್ಗಿದರು. 1947ರಲ್ಲಿ ದೇಶಕ್ಕೆ ಸ್ವಾತಂತ್ರ$್ಯ ಬಂದಾಗ 1952ರ ವರೆಗೂ ರಾಷ್ಟ್ರೀಯ ಸರ್ಕಾರ ಇತ್ತು. ಯಾವುದೇ ಪಕ್ಷದ ಸರ್ಕಾರ ಇರಲಿಲ್ಲ. ಆ ಸರ್ಕಾರದಲ್ಲಿ ಶಾಮ ಪ್ರಸಾದ್ ಮುಖಜಿರ್ ಇದ್ದರೂ, ಅಂದಿನ ಪ್ರಧಾನಿ ಜವಾಹರಲಾಲ್ ನೆಹರೂ ಅವರು ಕಾಶ್ಮೀರ ವಿಚಾರದಲ್ಲಿ ಪಾಕಿಸ್ತಾನದ ಜತೆಗೆ ಒಪ್ಪಂದ ಮಾಡಿಕೊಂಡಿದ್ದನ್ನು ವಿರೋಧಿಸಿ ಒಂದು ದೇಶದಲ್ಲಿ ಒಬ್ಬರೇ ಪಧಾನಿ ಇರಬೇಕು. ಏಕ್ ನಿಶಾನ್ ಏಕ್ ಪ್ರಧಾನ್ ಎಂದು ಘೋಷಿಸಿ ರಾಜೀನಾಮೆ ನೀಡಿ ಹೊರಬಂದು ಹೋರಾಟ ಮಾಡಿದ ಧೀಮಂತ ನಾಯಕ ಶಾಮ ಪ್ರಸಾದ್ ಮುಖಜಿರ್. ಅವರಿಗಿಂತ ಮುಂಚೆ ದೀನ್ ದಯಾಳ್ ಉಪಾಧ್ಯಾಯ ಅವರು ಏಕ್ ಆತ್ಮ ಎಂಬ ಮಹಾನ್ ಉದ್ದೇಶದ ಮೂಲಕ ಈ ಸಂಸ್ಥೆಯನ್ನು ಕಟ್ಟಿದರು. ಅದರ ಮೂಲ ಧ್ಯೇಯ ಅಂತ್ಯೋದಯ ಆಗಿತ್ತು. ಸಮಾಜದ ಕಟ್ಟಕಡೆಯ ವ್ಯಕ್ತಿಯ ಅಭಿವೃದ್ಧಿಯೇ ನಮ್ಮ ಗುರಿ ಅಂತ ತಿಳಿದು ಆರಂಭಿಸಿದರು ಎಂದರು.
ನಮ್ಮ ಮುಂದೆ ಎರಡು ದಾರಿಗಳಿವೆ. ಒಂದು ಪವರ್ ಪೊಲಿಟಿಕ್ಸ್ ಹಾಗೂ ಇನ್ನೊಂದು ಪಿಪಲ್ ಪೊಲಿಟೆಕ್, ಕೇವಲ ಅಧಿಕಾರಕ್ಕಾಗಿಯೇ ರಾಜಕಾರಣ ಮಾಡುವ ಒಂದು ವರ್ಗವಿದೆ. ನಾವೇನು ಸನ್ಯಾಸಿಗಳಲ್ಲ. ಜನರ ಸೇವೆ ಜನರ ಸಂಕಷ್ಟ ತಿಳಿದು ಅವರ ಮುಖಾಂತರ ನಮಗೆ ಅಧಿಕಾರ ಬಂದಾಗ ಜನರಿಗೆ ನ್ಯಾಯ ಕೊಡಲು ಸಾಧ್ಯವಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗ ಜನಪರ ಕೆಲಸ ಮಾಡಿದೆ. ರೈತರು, ತಾಯಂದಿರು, ಎಸ್ಸಿ ಎಸ್ಪಿ, ಒಬಿಸಿ ಜನಾಂಗಕ್ಕೆ ಯಾವಾಗಲೂ ಸಹಾಯ ಮಾಡುತ್ತ ಬಂದಿದೆ. ಆದರೆ, ಕಾಂಗ್ರೆಸ್ ಯಾವಾಗಲೂ ಪ್ರಚಾರ ಮಾಡಿಕೊಳ್ಳುತ್ತದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬಿಸಿ ಬಗ್ಗೆ ಮಾತನಾಡುತ್ತಾರೆ. ಆದರೆ, ಅವರ ಪಕ್ಷ ಒಬಿಸಿಗೆ ಏನು ಮಾಡಿದ್ದಾರೆ. ರಾಜ್ಯದಲ್ಲಿ ಒಬಿಸಿ ಸಿಎಂ ಇದ್ದಾರೆ. ಒಬಿಸಿ ನಿಗಮಗಳಿಗೆ ಯಾವುದೇ ಅನುದಾನ ನೀಡುತ್ತಿಲ್ಲ. ಎಸಿ ಎಸ್ಟಿ ಮೀಸಲಾತಿ ಹೆಚ್ಚಳವನ್ನು ನಾವು ಮಾಡಿದ್ದೇವೆ. ಯಾವ ಮುಖ್ಯಮಂತ್ರಿ ಇಂತಹ ಗಟ್ಟಿ ನಿರ್ಧಾರ ಮಾಡುತ್ತಿದ್ದರು ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಅವರು ಹೇಳಿದಷ್ಟೇ ಕಮಿಷನ್ ನಿರ್ಧಾರವಾಗುತ್ತಿದೆ. ಕಳೆದ ವರ್ಷ 40 ಸಾವಿರ ಹೆಚ್ಚಿನ ತೆರಿಗೆ ಹಾಕಿದ್ದರು. ಈ ವರ್ಷ ಬಜೆಟ್ ಇಲ್ಲದೆ 60 ಸಾವಿರ ಕೋಟಿ ಹೆಚ್ಚಿಗೆ ತೆರಿಗೆ ಹಾಕಿದ್ದಾರೆ. ಹಾಲು, ಡಿಸೇಲ್, ಕರೆಂಟ್ ಎಲ್ಲ ದರ ಹೆಚ್ಚಳ ಮಾಡಿದ್ದಾರೆ. ಇವತ್ತು ಅಭಿವೃದ್ಧಿ ಶೂನ್ಯ ಸರ್ಕಾರ ರಾಜ್ಯದಲ್ಲಿದೆ. ಜನ ವಿರೋಧಿ ಸರ್ಕಾರ ಇದೆ. ರಾಜ್ಯದಲ್ಲಿ ಪ್ರಜಾಪ್ರಭುತ್ತ ಇಲ್ಲ. ಅಘೋಷಿತ ತುರ್ತು ಪರಿಸ್ಥಿತಿ ಇದೆ. ಇಂತಹ ಸಂದರ್ಭದಲ್ಲಿ ವಿರೋಧ ಪಕ್ಷವಾಗಿ ಅದರ ವಿರುದ್ಧ ಹೋರಾಟ ಮಾಡುವುದು ನಮ್ಮ ಕರ್ತವ್ಯ. ಯಾರಿಗೆ ಕರ್ತವ್ಯ ಮಾಡುವ ಬದ್ಧತೆ ಇದೆ ಅವರು ಮುಂದೆ ಬರಬೇಕು. ಗಟ್ಟಿ ಕಾಳು ಬೇಕು ನಮಗೆ ಏನೇ ಕಷ್ಟ ಬರಲಿ ನಾವು ಗಟ್ಟಿಯಾಗಿ ನಿಂತು ಹೋರಾಟ ಮಾಡಬೇಕು. ರಾಜ್ಯದಲ್ಲಿ ಇವತ್ತೆ ಚುನಾವಣೆ ನಡೆದರೆ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದರು.
ಮಾಜಿ ಶಾಸಕ ವಿರುಪಾಕ್ಷಪ್ಪ ಬಳ್ಳಾರಿ, ಯುವ ಮುಖಂಡರಾದ ಭರತ ಬೊಮ್ಮಾಯಿ, ಭೋಜರಾಜ ಕರೂದಿ, ಮಂಜುನಾಥ ಓಲೇಕಾರ, ನಂಜುಡೇಶ ಕಳ್ಳೇರ, ಸಂತೋಷ ಆಲದಕಟ್ಟಿ, ಶೋಭಾ ನಿಸ್ಸಿಮಗೌಡ್ರ, ಭಾರತಿ ಜಂಬಗಿ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.