ಗೃಹಜ್ಯೋತಿ ನೋಂದಣಿ ಹೆಸರಲ್ಲಿ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ರಾಜ್ಯ ಸರ್ಕಾರ

gruha jyothi
Published on

ಬೆಂಗಳೂರು: ರಾಜ್ಯದಲ್ಲಿ ಗೃಹಜ್ಯೋತಿ(Gruha Jyothi) ನೋಂದಣಿಗೆ ಹಣ ವಸೂಲಿ ಮಾಡಿರುವ ಆರೋಪಗಳು ಕೇಳಿಬಂದ ಹಿನ್ನೆಲೆ ಇದೀಗ ರಾಜ್ಯ ಸರ್ಕಾರ(State Government) ಕಠಿಣ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ.

ಗೃಹಜ್ಯೋತಿ ನೋಂದಣಿಗೆ ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಆರೋಪ ಕೇಳಿಬಂದಿದ್ದು, ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗೃಹಜ್ಯೋತಿ ನೋಂದಣಿ ಸಂಪೂರ್ಣ ಉಚಿತವಾಗಿದ್ದು, ಗ್ರಾಮ ಒನ್, ಕರ್ನಾಟಕ ಒನ್ ಹಾಗೂ ಬೆಂಗಳೂರು ಒನ್ ಕೇಂದ್ರಗಳಲ್ಲಿ ಸೇವಾ ಶುಲ್ಕ 20 ರೂ. ಮಾತ್ರ ವಿಧಿಸಲಾಗುತ್ತಿದೆ. ಸೇವಾ ಶುಲ್ಕದ ಹೊರತಾಗಿ ಹೆಚ್ಚಿನ ಹಣವನ್ನು ಸಿಬ್ಬಂದಿಗಳು ಕೇಳಿದ್ದಲ್ಲಿ, ಸಾರ್ವಜನಿಕರು 1912 ಸಹಾಯವಾಣಿಗೆ ಕರೆ ಮಾಡಿ ದೂರು(Complaint) ದಾಖಲಿಸಬಹುದು. ಹಣ ವಸೂಲಿ ಮಾಡುವ ಕೇಂದ್ರಗಳ ವಿರುದ್ಧ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಸುತ್ತೋಲೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net