

ಬೆಂಗಳೂರು: ಚುನಾವಣಾ ಸಮಯ ಹತ್ತಿರವಾಗುತ್ತಿದ್ದಂತೆ ಈಗಾಗಲೇ ಐಎಎಸ್, ಐಪಿಎಸ್, ಡಿವೈಎಸ್ಪಿ ಸೇರಿದಂತೆ ವಿವಿಧ ಶ್ರೇಣಿಯ ಅಧಿಕಾರಿಗಳನ್ನು ಹಂತಹಂತವಾಗಿ ವರ್ಗಾವಣೆ ಮಾಡಲಾಗಿದೆ. ಇದೀಗ ಚುನಾವಣಾ ಆಯೋಗದ ಮಾರ್ಗಸೂಚಿಯ ಅನ್ವಯ, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಕಂದಾಯ ಇಲಾಖೆಯ ತಹಶೀಲ್ದಾರ್ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ರವಾನಿಸಿದೆ.
ಕಂದಾಯ ಇಲಾಖೆಯ 76 ತಹಶೀಲ್ದಾರ್ಗಳನ್ನು ವರ್ಗಾವಣೆ ಮಾಡಿ, ಸೂಚಿಸಿದ ಸ್ಥಳದಲ್ಲಿ ತಕ್ಷಣವೇ ಕೂಡಲೇ ಸೂಚಿಸಿದಲ್ಲಿ ಕರ್ತವ್ಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದೆ. ಈ ಕೆಳಗಿನ ಪಟ್ಟಿಯಲ್ಲಿ ವರ್ಗಾವಣೆ ಆಗಿರುವ ತಹಶೀಲ್ದಾರ್ಗಳು ಮತ್ತು ಅವರ ಹೊಸ ಕಾರ್ಯಸ್ಥಾನಗಳನ್ನು ನಮೂದಿಸಲಾಗಿದೆ.