

ಬೆಂಗಳೂರು: ಜಾಹಿರಾತು ವಿಷಯದಲ್ಲಿ ಪತಂಜಲಿ ಕಂಪನಿ ಹಾಗೂ ಯೋಗ ಗುರು ರಾಮ್ ದೇವ್ ವಿರುದ್ಧ ಸುಪ್ರಿಂಕೋರ್ಟ್ ಅಸಮಾಧಾನ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಸಿದ್ದರಾಮಯ್ಯ ಸರ್ಕಾರ ತನ್ನ ನಿಲುವು ಪ್ರಕಟಿಸಿದೆ.
ಬಾಬಾ ರಾಮ್‌ದೇವ್ ಮತ್ತು ಅವರ ಪತಂಜಲಿ ಕಂಪನಿ ಮಾಡಿರುವ ಘೋರ ವಂಚನೆ ಅಕ್ಷಮ್ಯ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ. ಅವರು ಆಯುರ್ವೇದ ಮತ್ತು ಭಾರತೀಯ ವೈದ್ಯಕೀಯ ಪದ್ಧತಿಗೆ ಅಪಖ್ಯಾತಿ ತಂದಿದ್ದಾರೆ. ಆರೋಗ್ಯ, ವ್ಯಾಪಾರ ಅಥವಾ ರಾಜಕೀಯದಲ್ಲಿ ಕುರುಡು ನಂಬಿಕೆಯನ್ನು ಹೊಂದಿರುವ ಇಂತಹದ್ದು ಎಂದು ದಿನೇಶ್ ಕುಟುಕಿದ್ದಾರೆ.
ಮುಖ್ಯವಾಗಿ ಎಲ್ಲಾ ಪತಂಜಲಿ ಉತ್ಪನ್ನಗಳ ಗುಣಮಟ್ಟವನ್ನು ಪರೀಕ್ಷಿಸಲು ನನ್ನ ಡ್ರಗ್ಸ್ ಕಂಟ್ರೋಲ್ ಡಿಪಾರ್ಟ್ಮೆಂಟ್ ಮತ್ತು ಆಯುಷ್ ಆಯುಕ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.