ಡಾ.ದೇವಮಾನೆಗೆ ವೈದ್ಯಶ್ರೀ ಪ್ರಶಸ್ತಿ

1676289932928
Published on

ವಿಜಯಪುರ: ಕರ್ನಾಟಕ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ 30ನೇ ರಾಜ್ಯಮಟ್ಟದ ಸಮ್ಮೇಳನದಲ್ಲಿ ಡಾ. ಪರಶುರಾಮ ದೇವಮಾನೆ ಅವರಿಗೆ ರಾಜ್ಯ ಮಟ್ಟದ ವೈದ್ಯಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಫೆಬ್ರುವರಿ 11, ರಂದು 12 ತುಮಕೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎ ಎನ್ ದೇಸಾಯಿ ಸನ್ಮಾನಿಸಿ ಗೌರವಿಸಿದ್ರು. ಡಾ. ಪರಶುರಾಮ ದೇವಮಾನೆ ಅವರು ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ರೇಡಿಯಾಲಜಿಸ್ಟ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ದೇವಮಾನೆಗೆ ಪ್ರಶಸ್ತಿ ಸಿಕ್ಕಿದ್ದರಿಂದ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಸಂಗಣ್ಣ ಲಕ್ಕಣ್ಣವರ ಸೇರಿದಂತೆ ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net