ರಾಜ್ಯಮಟ್ಟದ ಸ್ಪರ್ಧಾತ್ಮಕ ಪರೀಕ್ಷೆ

DR k SOWMYA
Published on

ಚಿತ್ರದುರ್ಗ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 132ನೇ ಜನ್ಮ ದಿನಾಚರಣೆ ಪ್ರಯುಕ್ತ ಸ್ಪರ್ಧಾತ್ಮಕ ಪರೀಕ್ಷೆ ಆ.27ರ ಬೆಳಗ್ಗೆ 10 ಗಂಟೆಗೆ ಸರ್ಕಾರಿ ಕಲಾ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ತಿಳಿಸಿದೆ.

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗೆ ಸಂಜೀವಿನಿ ಟ್ರಸ್ಟ್ ಅಧ್ಯಕ್ಷ ಡಾ.ಕೆ.ಸೌಮ್ಯಾ ಮಂಜುನಾಥಸ್ವಾಮಿ ಚಾಲನೆ ನೀಡಲಿದ್ದಾರೆ.

ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪುರಸ್ಕೃತೆ ಶಾರದಾ, ಪತ್ರಕರ್ತರ ಡಾ.ಸುರೇಂದ್ರನಾಥ್, ಶಿಕ್ಷಕ ಕಸವನಹಳ್ಳಿ ಶಿವಣ್ಣ, ದಲಿತ ಮುಖಂಡರಾದ ಬಾಳೇಕಾಯಿ ಶ್ರೀನಿವಾಸ್, ಹೊಳೆಯಪ್ಪ ಸಾಕ್ಯ, ವಿದ್ಯಾರ್ಥಿ ಪರಿಷತ್ ಜಿಲ್ಲಾ ಸಂಚಾಲಕ ಜೆ.ಶಾಂತಕುಮಾರ್ ಪಾಲ್ಗೊಳ್ಳಲಿದ್ದಾರೆ.

ಪರೀಕ್ಷೆಗೆ ಜಿಲ್ಲೆಯ ವಿವಿಧೆಡೆಯಿಂದ 150ಕ್ಕೂ ಹೆಚ್ಚು ಮಂದಿ ಹೆಸರು ನೊಂದಣಿ ಪಡೆದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net