

ವಿರಾಜಪೇಟೆ: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಹೆಸರಿನಲ್ಲಿ ನೀಡುತ್ತಿರುವ ರಾಜ್ಯಮಟ್ಟದ ಶ್ರೇಷ್ಠ ಶಿಕ್ಷಕ ಪ್ರಶಸ್ತಿಯನ್ನು ಬಿಳುಗುಂದ ಸರ್ಕಾರಿ ಪ್ರೌಢಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗಣಿತ ಶಿಕ್ಷಕಿ ಅರುಣ ಆನಿಅ್ಸ ಡಿಸೋಜ ಅವರು ಭಾಜನರಾಗಿದ್ದಾರೆ.ಬೆಂಗಳೂರಿನ ಭಾರತ ಜೋಡೋ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಲಾಯಿತು.
ಇವರು ಶಿಕ್ಷಣ ಕ್ಷೇತ್ರದಲ್ಲಿ 27 ವರ್ಷ ಸೇವೆ ಸಲ್ಲಿಸಿರುತ್ತಾರೆ. ವಿರಾಜಪೇಟೆಯ ಗಾಡ್ವಿನ್ ಡಿಸೋಜ ಅವರ ಪತ್ನಿ. ನಿವೃತ್ತ ಶಿಕ್ಷಕ ಆಲ್ಬರ್ಟ್ ಡಿಸೋಜಾ ಹಾಗೂ ದಿ.ಜುಲಿಯಾನ ಲೋಬೋ ಅವರ ಪುತ್ರಿ.