ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ 16ರಂದು

Published on

ಹುಬ್ಬಳ್ಳಿ: ಶ್ರೀ ಶಂಕರಲಿಂಗೇಶ್ವರ ಜಾತ್ರಾ ಮಹೋತ್ಸವ ನಿಮಿತ್ತ ರಾಜ್ಯ ಮಟ್ಟದ ಭಾರಿ ಜಂಗಿ ನಿಕಾಲಿ ಕುಸ್ತಿ ಪಂದ್ಯವನ್ನು ತಾಲೂಕಿನ ಮಾವನೂರಿನ ಬಸ್ ನಿಲ್ದಾಣ ಬಳಿ ಜ. 16ರಂದು ಮಧ್ಯಾಹ್ನ 3 ಗಂಟೆಗೆ ಏರ್ಪಡಿಸಲಾಗಿದೆ.

ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಧಾರವಾಡ ಬಾಲ ವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ಈರಣ್ಣ ಜಡಿ, ಮೂರುಸಾವಿರ ಮಠದ ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಹಾಗೂ ಮಣಕವಾಡದ ಶ್ರೀ ಅಭಿನವ ಮೃತ್ಯುಂಜಯ ಸ್ವಾಮೀಜಿ ಸಾನ್ನಿಧ್ಯ ವಹಿಸುವರು ಎಂದರು.

ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು. ಕುಂದಗೋಳ ಶಾಸಕ ಎಂ.ಆರ್. ಪಾಟೀಲ ಕುಸ್ತಿ ಪಂದ್ಯಾವಳಿಗೆ ಚಾಲನೆ ನೀಡುವರು. ಸಂಸದ ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್, ಶಾಸಕರಾದ ಅರವಿಂದ ಬೆಲ್ಲದ, ಪ್ರಸಾದ ಅಬ್ಬಯ್ಯ, ಮಹೇಶ ಟೆಂಗಿನಕಾಯಿ, ಎನ್.ಎಚ್. ಕೋನರಡ್ಡಿ, ಇತರರು ಆಗಮಿಸುವರು ಎಂದರು.

ಪಂದ್ಯದಲ್ಲಿ 55 ಜೋಡಿಗಳು ಭಾಗವಹಿಸುತ್ತಿವೆ. ಇದರಲ್ಲಿ ಐದು ಮಹಿಳಾ ಜೋಡಿಗಳು ಇರಲಿವೆ. 3 ಲಕ್ಷ ರೂ.ಗೂ ಹೆಚ್ಚು ನಗದು ಬಹುಮಾನ ವಿತರಿಸಲಾಗುವುದು ಎಂದರು.

ಹೈಕೋರ್ಟ್ ವಕೀಲ ಎಂ.ಎಸ್. ಗರಗ, ಕಲ್ಲಪ್ಪ ಸುಳ್ಳದ, ದಿವಾನ್‌ಸಾಬ್ ಶೇಖ್‌ಸನದಿ, ನಾಗಪ್ಪ ಹೊಂಬಳ, ಪ್ರತಾಪ ಪಾಟೀಲ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net