ಮೈಸೂರು, ಧಾರವಾಡದಲ್ಲಿ ಅತ್ಯಾಧುನಿಕ ಕೌಶಲ ಕೇಂದ್ರ

minister santhosh lad
ಕಾರ್ಮಿಕ ಸಚಿವ ಸಂತೋಷ್ ಲಾಡ್
Published on

ಬೆಂಗಳೂರು: ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಸಮಗ್ರ ಕೌಶಲ ಕಾರ್ಯಕ್ರಮ ಒದಗಿಸಲು ಮೈಸೂರು, ಧಾರವಾಡದಲ್ಲಿ ಅತ್ಯಾಧುನಿಕ ಕೌಶಲ ತರಬೇತಿ ಕೇಂದ್ರ ಸ್ಥಾಪಿಸಲು ಕಾರ್ಮಿಕ ಇಲಾಖೆ ಮುಂದಾಗಿದೆ.

ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್, ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಕೌಶಲಭರಿತ ಕಾರ್ಮಿಕ ವರ್ಗ ಸೃಷ್ಟಿಯಾದರೆ ಉತ್ಪಾದನಾ ವಲಯದಲ್ಲಿ ಹೆಚ್ಚಿನ ಯಶಸ್ಸು ದೊರೆಯುತ್ತದೆ. ಈ ನಿಟ್ಟಿನಲ್ಲಿ ಕಟ್ಟಡ ಕಾರ್ಮಿಕರು ಮತ್ತು ಅವರ ಮಕ್ಕಳಿಗೆ ಸಮಗ್ರ ಕೌಶಲ ಕಾರ್ಯಕ್ರಮ ನೀಡುವ ಉದ್ದೇಶದಿಂದ ಮೈಸೂರು ಮತ್ತು ಧಾರವಾಡದಲ್ಲಿ ಅತ್ಯಾಧುನಿಕ ಕೌಶಲ ಕೇಂದ್ರಗಳನ್ನು ಸ್ಥಾಪಿಸಲು ಯೋಜನೆ ರೂಪಿಸಿದೆ.

ಕಾರ್ಮಿಕರ ಮಕ್ಕಳಿಗೆ ಅತ್ಯಾಧುನಿಕ ಕೌಶಲ ತರಬೇತಿ ನೀಡಲಾಗುತ್ತದೆ. ತರಬೇತಿಗೆ ಬೇಕಾದ ಜಗತ್ತಿನ ವಿವಿಧೆಡೆ ಅತ್ಯಾಧುನಿಕ ಉಪಕರಣಗಳನ್ನು ಖರೀದಿ ಮಾಡಲಾಗುತ್ತದೆ. ಇಲ್ಲಿ ತರಬೇತಿ ಪಡೆದ ವಿದ್ಯಾರ್ಥಿಗಳು ನೇರವಾಗಿ ಕೆಲಸಕ್ಕೆ ಹೋಗುವಂತೆ ತಯಾರು ಮಾಡುವ ಉದ್ದೇಶವಾಗಿದೆ. 30 ವರ್ಷಗಳು ಅನುಭವಿ ಕಂಪನಿ, ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಸೂಕ್ತ ನಿರ್ಣಯ ಕೈಗೊಳ್ಳಲು ಸಚಿವರು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net