ರಾಜ್ಯದಲ್ಲಿ ಏಳು ದಿನಗಳಲ್ಲಿ 150 ಡೆಂಘೆ ಪ್ರಕರಣಗಳು ದೃಢ

Zika
Published on

ಬೆಂಗಳೂರು: ಹವಾಮಾನ ಬದಲಾವಣೆಯ ಜತೆಗೆ ಸೊಳ್ಳೆಗಳ ಉತ್ಪತ್ತಿ ತಾಣಗಳು ಹೆಚ್ಚುತ್ತಿದ್ದು, ರಾಜ್ಯದಲ್ಲಿ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇದರಿಂದ ಕಳೆದ ಏಳು ದಿನಗಳಲ್ಲಿ 150 ಡೆಂಘೆ ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಕಳೆದ ವರ್ಷ (2023ರಲ್ಲಿ ) 16,500ಕ್ಕೂ ಅಧಿಕ ಡೆಂಘೆ ಪ್ರಕರಣಗಳು ದೃಢಪಟ್ಟಿದ್ದು, 9 ಮಂದಿ ಮೃತಪಟ್ಟಿದ್ದರು. ಈ ವರ್ಷದ ಆರಂಭದಲ್ಲಿಯೇ ಸೋಂಕು ಪ್ರಕರಣಗಳ ಸಂಖ್ಯೆ ಏರಿಕೆಯಾಗಿದ್ದು, ಕಳೆದ ಏಳು ದಿನಗಳಲ್ಲಿ 2,352 ಶಂಕಿತರಲ್ಲಿ 1,371 ಮಂದಿಯ ರಕ್ತದ ಮಾದರಿ ಪರೀಕ್ಷೆಗೆ ಒಳಪಡಿಸಲಾಗಿದ್ದು, 150 ಪ್ರಕರಣಗಳು ದೃಢಪಟ್ಟಿವೆ.

2022ರಲ್ಲಿ ರಾಜ್ಯದಲ್ಲಿ 9,620 ಮಂದಿ ಡೆಂಗಿ ಜ್ವರದಿಂದ ಬಳಲಿದ್ದರು. ಅವರಲ್ಲಿ ಒಂಬತ್ತು ಮಂದಿ ಮೃತಪಟ್ಟಿರುವುದು ದೃಢಪಟ್ಟಿತ್ತು. ಕಳೆದ ಏಳ ದಿನಗಳಲ್ಲಿ 28 ಚಿಕನ್‌ಗುನ್ಯ ಪ್ರಕರಣಗಳು ವರದಿಯಾಗಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net