ಬೆಂಗಳೂರು ಸೇರಿ ರಾಜ್ಯದಲ್ಲಿ ಇಂದಿನಿಂದ 3 ದಿನ ಭರ್ಜರಿ ಮಳೆ! ಹವಾಮಾನ ಇಲಾಖೆ... Heavy Rain

city rain
Published on

ಬೆಂಗಳೂರು: ( Heavy Rain )  ಸಿಲಿಕಾನ್​ ಸಿಟಿ ಬೆಂಗಳೂರಲ್ಲಿ ವರ್ಷದ ಮೊದಲ ಮಳೆ ಆಗಿದೆ. ಬಿಸಿಲ ಬೇಗೆಯಿಂದ ಬೇಸತ್ತು ಹೋಗಿದ್ದ ಜನರಿಗೆ ಮಳೆ ತಂಪರೆದಿದೆ.

ರಾಜ್ಯದಲ್ಲಿ ಇತ್ತೀಚೆಗೆ ತಾಪಮಾನ ಭಾರೀ ಏರಿಕೆಯಾಗುತ್ತಿದೆ. ಅಲ್ಲದೇ ಹವಾಮಾನ ಇಲಾಖೆ ಕೂಡಾ ಈಗಾಗಲೇ ಮುಂದಿನ ದಿನಗಳಲ್ಲಿ ಮತ್ತಷ್ಟು ತಾಪಮಾನ ಏರಿಕೆಯಾಗಲಿದೆ ಎಂದು ಎಚ್ಚರಿಕೆ ನೀಡಿತ್ತು. ದಿನೇ ದಿನೇ ಬಿಸಿಲಿನ ತಾಪ ಏರಿಕೆಯಾಗುತ್ತಿದ್ದಂತೆ ಜನರಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕಾ ಕ್ರಮವನ್ನು ತೆಗೆದುಕೊಳ್ಳುವಂತೆ ಜನರಿಗೆ ಸೂಚನೆ ನೀಡಿತ್ತು. ಬೆಂಗಳೂರಿನ ಹಲವೆಡೆ ತುಂತುರು ಮಳೆಯಾಗಿತ್ತು. ಈ ಮೂಲಕ ಕರ್ನಾಟಕಕ್ಕೂ ಈಗಾಗಲೇ ಪೂರ್ವ ಮುಂಗಾರಿನ ಆಗಮನವಾಗಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾದ ಚಂಡಮಾರುತದ ಪರಿಣಾಮ ಮಳೆ ಜೋರಾಗಿದೆ. ಇಂದು ಕೂಡ ನಗರದ ವಿವಿಧ ಏರಿಯಾಗಳಲ್ಲಿ ಮಳೆ ಆಗಲಿದೆ. ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಈಗಾಗಲೇ ಪಕ್ಕದ ರಾಜ್ಯ ತಮಿಳುನಾಡಿನ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ರಾಜ್ಯದಲ್ಲೂ ಮಳೆ ಆರ್ಭಟ ಜೋರಾಗಿದೆ. ಬೆಂಗಳೂರಲ್ಲೂ ಮೂರು ದಿನ ಇದೇ ರೀತಿ ವಾತಾವರಣ ಇರಲಿದೆ. ಬುಧವಾರ ಬೆಳಗ್ಗೆಯಿಂದ ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಜೋರು ಮಳೆ ಆಗಲಿದೆ. ಭಾರೀ ಮಳೆ ಮುನ್ಸೂಚನೆ ಇರೋ ಕಾರಣ ರಾಜ್ಯ ಸರ್ಕಾರ ಕಟ್ಟೆಚ್ಚರ ವಹಿಸಿದೆ.

ನಗರಾದ್ಯಂತ ಮೋಡ ಕವಿದ ವಾತವರಣ ಕಂಡು ಬರಲಿದೆ.   ಅನೇಕ ಬಡಾವಣೆಗಳಲ್ಲಿ ಉತ್ತಮ ಹಗುರದಿಂದ ಸಾಧಾರಣ ಮಳೆ ಬೀಳಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net