ಇಂಡಿಯಾ ಮೈತ್ರಿಕೂಟವನ್ನು ಬೆಂಬಲಿಸಿ: ವಲಸಿಗರಿಗೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ​ | DK Shivakumar

 ಡಿಸಿಎಂ ಡಿಕೆ ಶಿವಕುಮಾರ್ ಮನವಿ​ | DK Shivakumar
ಡಿಸಿಎಂ ಡಿಕೆ ಶಿವಕುಮಾರ್ ಮನವಿ​ | DK Shivakumar
Published on
ಬೆಂಗಳೂರು: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಮಹಾಘಟಬಂಧನ್‌ಗೆ ಮತ ಚಲಾಯಿಸುವಂತೆ ಬೆಂಗಳೂರಿನಲ್ಲಿ ವಾಸಿಸುವ ಬಿಹಾರದ ಜನರಲ್ಲಿ ಮನವಿ ಮಾಡಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್(DK Shivakumar), ತೇಜಸ್ವಿ ಯಾದವ್ ಅವರನ್ನು ರಾಜ್ಯದ ಮುಖ್ಯಮಂತ್ರಿಯನ್ನಾಗಿ ಮತ್ತು ರಾಹುಲ್ ಗಾಂಧಿಯನ್ನು ಪ್ರಧಾನಿಯನ್ನಾಗಿ ಮಾಡಲು ಕೈಜೋಡಿಸುವಂತೆ ಒತ್ತಾಯಿಸಿದರು.
ಬಿಹಾರದ ಜನರು ಶ್ರಮಜೀವಿಗಳು ಎಂದ ಶಿವಕುಮಾರ್, ಕಾಂಗ್ರೆಸ್ ಬಿಹಾರದ ಜನರಿಗೆ ಎಲ್ಲಾ ಅಂಶಗಳಲ್ಲಿಯೂ ಉಪಯೋಗವಾಗುವ ದೃಷ್ಟಿಕೋನ ಹೊಂದಿದೆ, ಮಹಾಘಟಬಂಧನದ ಭಾಗವಾಗಿ ಬಿಹಾರದಲ್ಲಿ ಕೈ ಅಧಿಕಾರಕ್ಕೆ ಬಂದರೆ, ಕರ್ನಾಟಕದಂತಹ ಗ್ಯಾರಂಟಿ ಯೋಜನೆಗಳನ್ನು ಅಲ್ಲಿಯೂ ಜಾರಿಗೆ ತರುವುದಾಗಿ ಭರವಸೆ ನೀಡಿದರು.
ಇದೇ ವೇಳೆ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟವನ್ನು ಟೀಕಿಸಿದ ಡಿಕೆಶಿ, ನಿತೀಶ್ ಕುಮಾರ್ ಯುಗ ಅಂತ್ಯಗೊಂಡಿದ್ದು, ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡುವುದಿಲ್ಲ, ಬಿಹಾರದಲ್ಲಿ ಬಿಜೆಪಿ ಹಿನ್ನಡೆ ಅನುಭವಿಸಿದೆ, ಆದ್ದರಿಂದ ತೇಜಸ್ವಿ ಯಾದವ್​ರನ್ನು ರಾಜ್ಯದ ಮುಖ್ಯಮಂತ್ರಿಯಾಗಿ ಬೆಂಬಲಿಸುವಂತೆ ನೆರೆದಿದ್ದವರನ್ನು ಒತ್ತಾಯಿಸುತ್ತಾ, ಎಲ್ಲಾ ವಲಸೆ ಕಾರ್ಮಿಕರಿಗೆ ಬಿಹಾರಕ್ಕೆ ಹೋಗಿ ತಮ್ಮ ಸಾಂವಿಧಾನಿಕ ಹಕ್ಕುಗಳನ್ನು ಚಲಾಯಿಸಲು ರಜೆ ನೀಡುವಂತೆ ಆಯಾ ಸಂಸ್ಥೆಗಳಿಗೆ ವಿನಂತಿಸುವುದಾಗಿ ತಿಳಿಸಿದರು.
ಬಿಹಾರ ವಿಧಾನಸಭಾ ಚುನಾವಣೆಗಳು ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14 ಫಲಿತಾಂಶ ಹೊರಬೀಳಲಿದೆ. ಮಹಾಘಟಬಂದನ್​ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿಪಕ್ಷ ನಾಯಕ ತೇಜಸ್ವಿ ಯಾದವ್​ ಹೆಸರನ್ನು ಘೋಷಿಸಲಾಗಿದೆ(ಏಜೆನ್ಸೀಸ್​).
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net