ಮಹಿಳಾ ನೌಕರರಿಗೆ ತಿಂಗಳಿಗೆ 1 ದಿನ ಋತುಚಕ್ರದ ರಜೆ: ಸರ್ಕಾರದಿಂದ ಅಧಿಕೃತ ಅದೇಶ | menstrual leave

ವಿಧಾನಸೌಧ
ವಿಧಾನಸೌಧ
Published on
ಬೆಂಗಳೂರು: ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ,ಗುತ್ತಿಗೆ, ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ(menstrual leave) ಸಮಯದಲ್ಲಿ ತಿಂಗಳಲ್ಲಿ ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ನೀಡಲಾಗುತ್ತದೆ ಎಂದು ಮಂಗಳವಾರ (ಡಿ.2) ಸರ್ಕಾರ ಅಧಿಕೃತವಾಗಿ ಆದೇಶ ನೀಡಿದೆ.
ಈ ಮೂಲಕ ರಾಜ್ಯ ಮಹಿಳಾ ಸರ್ಕಾರಿ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ ನೀಡಲಾಗುತ್ತದೆ. ಅಲ್ಲದೆ, ಎಲ್ಲ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲು ಸರ್ಕಾರ ಆದೇಶಿಸಿದೆ.
ಪ್ರಮುಖವಾಗಿ ಸರ್ಕಾರವು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಕೆಳಕಂಡ ಷರತ್ತುಗಳಿಗೊಳಪಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಿದೆ.
1. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ಮಹಿಳಾ ಸರ್ಕಾರಿ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.
2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.
3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.
4. ಋತುಚಕ್ರದ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net