ಕಲಬುರಗಿ: ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಹತ್ತನೇ ಘಟಿಕೋತ್ಸವವು ಏಪ್ರಿಲ್ 22 ರಂದು ಬುಧವಾರ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಸಿ.ಯು.ಕೆ. ವಿವಿಧೋದ್ದೇಶ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಭಾರತದ ಗೌರವಾನ್ವಿತ ಉಪ ರಾಷ್ಟ್ರಪತಿಗಳಾದ ಸಿ.ಪಿ. ರಾಧಾಕೃಷ್ಣನ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಘಟಿಕೋತ್ಸವ ಭಾಷಣ ಮಾಡುವರು. ಕರ್ನಾಟಕ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಗೌರವಾನ್ವಿತ ಅತಿಥಿಗಳಾಗಿ ಪಾಲ್ಗೊಳ್ಳುವರು.
ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ಬಟ್ಟು ಸತ್ಯನಾರಾಯಣ ಅವರು ಕಾರ್ಯಕ್ರಮದ ಅಧ್ಯಕ್ಷತೆವಹಿಸುವರು. ಪರೀಕ್ಷಾ ನಿಯಂತ್ರಣಾಧಿಕಾರಿ ಪ್ರೊ. ಭರತ್ ಕುಮಾರ ಹಾಗೂ ಕುಲಸಚಿವ ಪ್ರೊ. ಆರ್.ಆರ್. ಬಿರಾದಾರ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು.