17 ವಿದ್ಯಾರ್ಥಿಗಳು ಸಾವು

ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ
ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ
Published on
ಬೆಂಗಳೂರು: ರಾಜ್ಯದ ವಸತಿ ಶಿಕ್ಷಣ ಸಂಸ್ಥೆಗಳ ಸಂಘ(ಕ್ರೈಸ್) ವಸತಿ ನಿಲಯಗಳಲ್ಲಿ ಕಳೆದ 3 ವರ್ಷಗಳಲ್ಲಿ 17 ವಿದ್ಯಾರ್ಥಿಗಳು ಸಾವಿಗೀಡಾಗಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದರು.
ಸೋಮವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ ಕೆ. ಶಿವಕುಮಾರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಕೆ.ಎಚ್. ಮುನಿಯಪ್ಪ, ರಾಜ್ಯದ 10 ಜಿಲ್ಲೆಗಳಲ್ಲಿ ಇರುವ ಕ್ರೈಸ್ ವಸತಿ ನಿಲಯಗಳಲ್ಲಿ ಆರೋಗ್ಯ ಸಮಸ್ಯೆಯಿಂದ ನಾಲ್ವರು ವಿದ್ಯಾರ್ಥಿಗಳು ಮೃತಪಟ್ಟಿದ್ದರೆ, ವಿದ್ಯುತ್ ಶಾಕ್ ಸೇರಿ ಆಕಸ್ಮಿಕವಾಗಿ 9 ಮಂದಿ ಮತ್ತು ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.
ಕ್ರೈಸ್ ವಸತಿ ನಿಲಯಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಲಾಗುವುದು. ಸಂಸ್ಥೆಯಲ್ಲಿ 9,756 ಬೋಧಕ ಹುದ್ದೆಗಳು ಮಂಜೂರಾಗಿದೆ. ಈ ಪೈಕಿ 5,430ಭರ್ತಿ ಮಾಡಲಾಗಿದೆ. 4,326 ಹುದ್ದೆಗಳು ಖಾಲಿ ಇವೆ. 2,432 ಬೋಧಕೇತರ ಹುದ್ದೆಗಳು ಮಂಜೂರಾಗಿದ್ದು, 1100 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ. 1,332 ಹುದ್ದೆಗಳು ಖಾಲಿ ಇವೆ ಎಂದು ತಿಳಿಸಿದರು.
ಕ್ರೈಸ್ ವಸತಿ ನಿಲಯಗಳಲ್ಲಿ ಉತ್ತಮ ಶಿಕ್ಷಣ ನೀಡಲಾಗುತ್ತಿದೆ. ಸರ್ಕಾರಿ ಶಾಲೆಗಳಿಗಿಂತಲೂ ಇಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳು ಉತ್ತಮ ಅಂಕ ಗಳಿಸಿದ್ದಾರೆ. ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆ ಆಗಬಾರದು ಎಂದು ಅತಿಥಿ ಶಿಕ್ಷಕರ ನೇಮಕ ಮಾತ್ರವಲ್ಲದೆ, ಹೊರ ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ ಎಂದು ಕೆ.ಎಚ್. ಮುನಿಯಪ್ಪ ಹೇಳಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net