ಬೆಂಗಳೂರು: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿಗೆ ರಾಜ್ಯ ಸರ್ಕಾರವು ನಿಯಮಗಳನ್ನು ರೂಪಿಸಿ ಗೆಜೆಟ್ ಅಧಿಸೂಚನೆ ಪ್ರಕಟಿಸಿದೆ. ಅದರಂತೆ, ಪ್ರಾಥಮಿಕ ಶಾಲಾ ಶಿಕ್ಷಕರು (1-5ನೇ ತರಗತಿ) ಮತ್ತು ಪದವೀಧರ ಶಾಲಾ ಶಿಕ್ಷಕರು (6-8ನೇ ತರಗತಿ) ವೃಂದದಿಂದ ಅನುಕ್ರಮವಾಗಿ 2:1 ಅನುಪಾತದಲ್ಲಿ ಮುಂಬಡ್ತಿ ನೀಡುವ ಮೂಲಕ ಪ್ರತಿ ಮೂರನೇ ರಿಕ್ತ ಸ್ಥಾನವನ್ನು ತುಂಬುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಧಿಸೂಚನೆಯಲ್ಲಿ ನಿರ್ದೇಶಿಸಿದೆ.