ಇಷ್ಟೇ ಅಲ್ಲದೇ ವಿದೇಶದಲ್ಲಿರುವ ಲಕ್ಷ್ಮಿ ಅವರ ಮಕ್ಕಳಿಗೆ ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಬ್ಯಾಂಕ್ ಮ್ಯಾನೇಜರ್ ಕೊಟ್ಟ ತಾಂತ್ರಿಕ ಸುಳಿವುಗಳ ಮೂಲಕ ತನಿಖೆ ನಡೆಸಿದ ಪೊಲೀಸರು, ಮುಂಬೈ ,ಅಲಹಬಾದ್, ದೆಹಲಿ ಮೂಲದ ಆರೋಪಿಗಳನ್ನು ಸೆರೆಹಿಡಿದಿದ್ದಾರೆ. ಸುಲಿಗೆ ಮಾಡಿದ್ದ ಹಣವನ್ನು ಆರೋಪಿಗಳು ಒಟ್ಟು 22 ಖಾತೆಗಳಿಗೆ ವರ್ಗಾಯಿಸಿರುವುದು ತಿಳಿದುಬಂದಿದೆ. ಅದರ ಮೇರೆಗೆ 60 ಲಕ್ಷ ಹಣ ಇರುವ ವಂಚಕರ ಖಾತೆಗಳನ್ನು ಪೊಲೀಸರು ಸೀಜ್ ಮಾಡಿದ್ದಾರೆ, (ಏಜೆನ್ಸೀಸ್).