

ಕರ್ನಾಟಕ ತಂಡವು ಒಟ್ಟು 28 ಚಿನ್ನ,1 ಬೆಳ್ಳಿ ಹಾಗೂ 01 ಕಂಚು ಪದಕಗಳನ್ನು ಗೆದ್ದು ಸಮಗ್ರ ಚಾಂಪಿಯನ್ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡು ರಾಜ್ಯಕ್ಕೆ ಕೀರ್ತಿ ತಂದಿದೆ.
ಈ ಅಪೂರ್ವ ಸಾಧನೆ ಕುರಿತು ಸಂತಸ ವ್ಯಕ್ತಪಡಿಸಿದ ಕರ್ನಾಟಕ ಕುಸ್ತಿ ಸಂಘದ ಅಧ್ಯಕ್ಷರಾದ ಬಿ. ಗುಣರಂಜನ್ ಶೆಟ್ಟಿ ಅವರು ಎಲ್ಲಾ ಕುಸ್ತಿಪಟುಗಳು, ತರಬೇತುದಾರರು ಹಾಗೂ ಅಧಿಕಾರಿಗಳನ್ನು ಅಭಿನಂದಿಸಿ, ಕರ್ನಾಟಕಕ್ಕೆ ಕೀರ್ತಿ ತಂದಿದ್ದಕ್ಕಾಗಿ ಶುಭಾಶಯಗಳನ್ನು ತಿಳಿಸಿದ್ದಾರೆ.