ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ದುರ್ಮರಣ, ಮೂವರ ಸ್ಥಿತಿ ಗಂಭೀರ

ಅಪಘಾದ ದೃಶ್ಯ
ಅಪಘಾದ ದೃಶ್ಯ
Published on

ಪ್ರಮುಖ ಮುಖ್ಯಾಂಶಗಳು

  • 1 ವರ್ಷದ ಮಗುವಿನ ಜನ್ಮದಿನ ಆಚರಿಸಿಕೊಂಡು ವಾಪಾಸ್ ಆಗುವಾಗ ದುರ್ಘಟನೆ
  • ನಿಂತಿದ್ದ ಲಾರಿಗೆ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತ
ಹಾವೇರಿ: ಒಂದು ವರ್ಷದ ಮಗುವಿನ ಜನ್ಮದಿನವನ್ನು ಆಚರಿಸಿಕೊಂಡು ಕಾರವಾರಕ್ಕೆ ದೇವರ ದರ್ಶನಕ್ಕೆ ತೆರಳುತ್ತಿದ್ದ ವೇಳೆ ನಿಂತಿದ್ದ ಲಾರಿಗೆ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂರು ಮಂದಿಯ ಸ್ಥಿತಿ ಗಂಭೀರವಾಗಿದೆ.
ಹಾವೇರಿಯ ರಾಣೇಬೆನ್ನೂರು ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಚಳಗೇರಿ ಟೋಲ್ ಸಮೀಪದ ನಿಸರ್ಗ ಡಾಬಾ ಮುಂದೆ ಈ ದುರ್ಘಟನೆ ಸಂಭವಿಸಿದೆ. ತಾಯಿ, ಪುಟ್ಟ ಕಂದಮ್ಮ ಮತ್ತು ಕುಟುಂಬ ಸದಸ್ಯೆಯಾದ ಸಿಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಡ್ರೈವಿಂಗ್ ಮಾಡುತ್ತಿದ್ದ ಸಿದ್ದಾರ್ಥ (27), ಹಸನ್ಮುಖಿ (29) ಹಾಗೂ ಯಶೋಧಾ ಬಾಯಿ (51) ಮೃತ ದುರ್ದೈವಿಗಳು ಎನ್ನಲಾಗಿದೆ.
ಸೌಂದರ್ಯ (26), ಸಿಂಧು (24) ಮತ್ತು ಕಶ್ವಶ್ರೀ (1) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನಲ್ಲಿದ್ದ ಎಲ್ಲರೂ ದಾವಣಗೆರೆಯ ನಿಟವಳ್ಳಿ ಮೌನೇಶ್ವರ ಬಡವಾಣಿಯ ನಿವಾಸಿಗಳು ಎಂದು ವಿವರಿಸಲಾಗಿದೆ. ಕಾರವಾರದಿಂದ ದಾವಣಗೆರೆಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಕುಟುಂಬದ ಮೂವರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಸ್ಥಳಕ್ಕೆ ರಾಣೇಬೆನ್ನೂರು ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net