ವಿಷಯ ತಿಳಿಯುತ್ತಲೇ ಆಸ್ಪತ್ರೆಗೆ ದೌಡಾಯಿಸಿದ ಸುರಪುರ ಟಿಎಚ್ಒ ಡಾ.ವೆಂಕಟಪ್ಪ ನಾಯಕ, ಜ್ವರಪೀಡಿತ 18 ಮಕ್ಕಳ ರಕ್ತದ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳಿಸಿದ್ದು, ವರದಿ ಬಂದ ಬಳಿಕ ನಿಖರ ಕಾರಣ ತಿಳಿಯಲಿದೆ. ಅಗತ್ಯ ಚಿಕಿತ್ಸೆ ನೀಡಲಾಗುತ್ತಿದ್ದು, ಆತಂಕಪಡುವ ಅಗತ್ಯವಿಲ್ಲ. ೇತ್ರ ಶಿಣಾಧಿಕಾರಿ ಲಿಂಗರಾಜ ಮೂಲಿಮನಿ ಸಹ ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳ ಆರೋಗ್ಯ ವಿಚಾರಿಸಿದ್ದಾರೆ.