ವೇಮಗಲ್ ಪಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಪಪಂ ಅಧ್ಯೆ ಡಿ.ಅನುಷಾ, ಉಪಾಧ್ಯಕ್ಷ ಸಿ.ಎಸ್ ವೆಂಕಟೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಎಂ ನಾಗೇಶ್, ಮುಖ್ಯಾಧಿಕಾರಿ meeting ಎಸ್.ಎಂ ವೆಂಕಟೇಶ್ ಇದ್ದರು.
Published on:
Copied
Follow Us
ವೇಮಗಲ್: ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಅಧ್ಯೆ ಡಿ.ಅನುಷಾ ಅವರ ವೇಮಗಲ್ನಲ್ಲಿ 400 ಹೊಸ ಬೀದಿದೀಪ ಅಳವಡಿಕೆ meeting ಅಧ್ಯಕ್ಷತೆಯಲ್ಲಿ ಗುರುವಾರ ಆಯೋಜಿಸಿದ್ದ ಸಾಮಾನ್ಯ ಸಭೆಯು ಪಟ್ಟಣದ ಪ್ರಗತಿಯ ದೃಷ್ಟಿಯಿಂದ ಅತ್ಯಂತ ನಿರ್ಣಾಯಕ ನಿರ್ಧಾರಗಳಿಗೆ ಸಾಕ್ಷಿಯಾಯಿತು.
ಸಭೆಯ ಆರಂಭದಲ್ಲಿ ಪಟ್ಟಣದ ಸದ್ಯದ ಸ್ಥಿತಿಗತಿಗಳ ಬಗ್ಗೆ ಪರಾಮರ್ಶೆ ನಡೆಸಿದ ಅಧ್ಯಕ್ಷರು, ಅನುಗುಣವಾಗಿ ಸ್ವಚ್ಛತಾ ಕೆಲಸ ಪೂರ್ಣಗೊಳಿಸಲು ಸೂಚಿಸಿದರು.
ಪ್ರಸ್ತುತ ಇರುವ ಸಿಬ್ಬಂದಿ ಕೊರತೆ ನೀಗಿಸಲು ಸಭೆ ಹೊರಗುತ್ತಿಗೆ ಆಧಾರದ ಮೇಲೆ ಹೆಚ್ಚುವರಿ 46 ಮಂದಿ ನೇಮಕ ಮಾಡಿಕೊಳ್ಳುವ ಪ್ರಸ್ತಾವನೆಗೆ ಸಭೆಯು ಒಪ್ಪಿಗೆ ನೀಡಿತು. ಇದರೊಂದಿಗೆ ಪ್ರಮುಖ ವಾರ್ಡ್ಗಳನ್ನು ಗುರುತಿಸಿ ಒಟ್ಟು 400 ಹೊಸ ಬೀದಿ ದೀಪಗಳನ್ನು ಅಳವಡಿಸಲು ತೀಮಾರ್ನಿಸಲಾಯಿತು. ಇದರಿಂದ ರಾತ್ರಿ ವೇಳೆಯಲ್ಲಿ ಸಾರ್ವಜನಿಕರು ಮತ್ತು ವಾಹನ ಸವಾರರು ಎದುರಿಸುತ್ತಿದ್ದ ತೊಂದರೆಗಳಿಗೆ ಶಾಶ್ವತ ಪರಿಹಾರ ಸಿಗಲಿದೆ.
ಸರ್ಕಾರದ "ಅಮೃತ್ 2.0' ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಸಭೆಯಲ್ಲಿ ತೀಮಾರ್ನಿಸಲಾಯಿತು. ಈ ಯೋಜನೆಯಡಿ ವೇಮಗಲ್ ಪಟ್ಟಣ ವ್ಯಾಪ್ತಿಯಲ್ಲಿ ಬರುವ ಮೂರು ಪ್ರಮುಖ ಉದ್ಯಾನವನಗುರುತಿಸಲಾಗಿದ್ದು, ಇವುಗಳನ್ನು ಆಧುನಿಕ ಮಾದರಿಯಲ್ಲಿ ನವೀಕರಿಸಲು ಮತ್ತು ಅಭಿವೃದ್ಧಿಪಡಿಸಲು ಅನುಮೋದನೆ ಪಡೆಯಲಾಯಿತು.
ನೀರಿನ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವ ಕುರಿತು ಸಭೆಯಲ್ಲಿ ಗಂಭೀರ ಚರ್ಚೆ ನಡೆಯಿತು. ಸಭೆಯಲ್ಲಿ ಉಪಸ್ಥಿತರಿದ್ದ ಪಟ್ಟಣ ಪಂಚಾಯಿತಿ ಸದಸ್ಯರು ತಮ್ಮ ವಾರ್ಡ್ಗಳ ಸಮಸ್ಯೆಗಳನ್ನು ಸಭೆಯ ಗಮನಕ್ಕೆ ತಂದರು. ಅವುಗಳಿಗೆ ಪೂರಕವಾಗಿ ಸ್ಪಂದಿಸಿದ ಅಧ್ಯಕ್ಷರು ಎಲ್ಲ ಅಭಿವೃದ್ಧಿ ಕಾರ್ಯ ಜಾರಿಗೆ ತರುವುದಾಗಿ ಭರವಸೆ ನೀಡಿದರು.
ಬೇಸಿಗೆಯ ಸಂದರ್ಭದಲ್ಲಿ ಸಾರ್ವಜನಿಕರಿಗೆ ನೀರಿನ ತೊಂದರೆಯಾಗದಂತೆ ಎಚ್ಚರಿಕೆ ವಹಿಸುವಂತೆ ಸೂಚಿಸಿದ ಅಧ್ಯಕ್ಷರು, ಪೈಪ್ಲೈನ್ಗಳಲ್ಲಿ ನೀರು ಪೋಲಾಗದಂತೆ ತಡೆಯಲು ಮತ್ತು ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.