ಕೈಗಾರಿಕೆಯಲ್ಲಿ ಉತ್ಪಾದಿಸಲ್ಪಡುವ ಟ್ರಾನ್ಸ್ ಫ್ಯಾಟ್‌ಗಳು ಸಾರ್ವಜನಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದಲ್ಲದೆ, ಅಪಾಯಕಾರಿ ಅಂಶಗಳನ್ನು ಒಳಗೊಂಡಿರುತ್ತವೆ. ಹೃದಯ ಮತ್ತು ರಕ್ತನಾಳಗಳ ಕಾಯಿಲೆಗಳು, ಸ್ಥೂಲಕಾಯ, ಚಯಾಪಚಯ ಸಂಬಂಧಿತ ಅಸ್ವಸ್ಥತೆಗಳು ಹಾಗೂ ಸಂತಾನೋತ್ಪತ್ತಿ ಆರೋಗ್ಯದ ಮೇಲೆ ದುಷ್ಪರಿಣಾಮಗಳನ್ನು ಉಂಟುಮಾಡುತ್ತವೆ. ಜಾಗತಿಕ ಮಟ್ಟದಲ್ಲಿ ಪ್ರತಿವರ್ಷ ಸುಮಾರು 2.78 ಲಕ್ಷಕ್ಕೂ ಹೆಚ್ಚು ಸಾವುಗಳು ಕೈಗಾರಿಕೆಗಳಲ್ಲಿ ಉತ್ಪಾದಿಸಲ್ಪಡುವ ಟ್ರಾನ್ಸ್ ಫ್ಯಾಟ್‌ಗಳ ಸೇವನೆಯೊಂದಿಗೆ ಸಂಬಂಧ ಹೊಂದಿದ್ದು, ವಿಶ್ವ ಆರೋಗ್ಯ ಸಂಸ್ಥೆ ಇವುಗಳ ಜಾಗತಿಕ ನಿರ್ಮೂಲನೆಗೆ ಕರೆ ನೀಡಿದೆ ಎಂದರು.