ರಾಜ್ಯದಲ್ಲಿ ಮುಂದಿನ 5 ವರ್ಷದಲ್ಲಿ 5 ಲಕ್ಷ ಉದ್ಯೋಗ ನಿರೀಕ್ಷೆ
ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಕರ್ನಾಟಕ ನವೋದ್ಯಮ ನೀತಿ ಮತ್ತು ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಫ್)ಗಳಿಗೆ ಒಂಸು ಸಾವಿರ ಕೋಟಿ ರೂ. ಅನುದಾನ
2035ರ ವೇಳೆಗೆ 20 ಡಾಲರ್ ಬಿಲಿಯನ್ ಕ್ವಾಂಟಮ್ ಆರ್ಥಿಕತೆಯನ್ನು ನಿರ್ಮಿಸಲು ‘ಕರ್ನಾಟಕ ಕ್ವಾಂಟಮ್ ರೋಡ್‌ಮ್ಯಾಪ್’
ಕೈಗಾರಿಕಾ ಪರವಾದ ವಾತಾವರಣಗಳಿಂದಾಗಿ ರಾಜ್ಯವು ಐಟಿ-ಬಿಟಿ ಕ್ಷೇತ್ರಗಳಲ್ಲಿ ಇಡೀ ದೇಶದಲ್ಲಿಯೇ ಮುಂಚೂಣಿ ಸ್ಥಾನ
ಬೆಂಗಳೂರು: ಕರ್ನಾಟಕ ನವೋದ್ಯಮ ನೀತಿ ಮತ್ತು ಸ್ಥಳೀಯ ಆರ್ಥಿಕ ವೇಗವರ್ಧಕ ಕಾರ್ಯಕ್ರಮ (ಲೀಫ್)ಗಳಿಗೆ ಒಂಸು ಸಾವಿರ ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಮುಂದಿನ ಐದು ವರ್ಷಗಳಲ್ಲಿ ಐದು ಲಕ್ಷ ಉದ್ಯೋಗ ಸೃಷ್ಟಿಯಾಗಬಹುದೆಂಬ ನಿರೀಕ್ಷೆ ಹೊಂದಲಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹಲೋತ್ ಶ್ಲಾಸಿದರು.
ಜಿಲ್ಲಾಡಳಿತ ಮತ್ತು ಜಿಬಿಎ ವತಿಯಿಂದ ಪೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ 77ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಬಳಿಕ ರಾಜ್ಯಕ್ಕೆ ಗಣರಾಜ್ಯೋತ್ಸವ ಸಂದೇಶ ನೀಡಿದರು.
ಜ್ಞಾನ-ವಿಜ್ಞಾನ ವಲಯಗಳು, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಕೈಗಾರಿಕಾ ಪರವಾದ ವಾತಾವರಣಗಳಿಂದಾಗಿ ರಾಜ್ಯವು ಐಟಿ-ಬಿಟಿ ಕ್ಷೇತ್ರಗಳಲ್ಲಿ ಇಡೀ ದೇಶದಲ್ಲಿಯೇ ಮುಂಚೂಣಿ ಸ್ಥಾನದಲ್ಲಿದೆ. 2035ರ ವೇಳೆಗೆ 20 ಡಾಲರ್ ಬಿಲಿಯನ್ ಕ್ವಾಂಟಮ್ ಆರ್ಥಿಕತೆಯನ್ನು ನಿರ್ಮಿಸಲು ‘ಕರ್ನಾಟಕ ಕ್ವಾಂಟಮ್ ರೋಡ್‌ಮ್ಯಾಪ್’ ಅನ್ನು ಬಿಡುಗಡೆ ಮಾಡಲಾಗಿದೆ ಎಂದರು.
ಜನರು ಸಂವಿಧಾನದ ಆಶಯ ತಿಳಿಯಿರಿ:
ಸಂವಿಧಾನವು ಎಷ್ಟೇ ಒಳ್ಳೆಯದಾಗಿರಲಿ ಅದನ್ನು ಅನುಷ್ಠಾನ ಮಾಡುವ ಜನ ಕೆಟ್ಟವರಾಗಿದ್ದರೆ, ಪರಿಣಾಮ ಕೆಟ್ಟದ್ದೇ ಆಗುತ್ತದೆ. ಸಂವಿಧಾನ ಎಷ್ಟೇ ಕೆಟ್ಟದಾಗಿದ್ದರೂ ಅದನ್ನು ಅನುಷ್ಠಾನಗೊಳಿಸುವವರು ಒಳ್ಳೆಯದಾಗಿದ್ದರೆ, ಅದರ ಪರಿಣಾಮ ಒಳ್ಳೆಯದೇ ಆಗುತ್ತದೆ ಎಂಬುದು ಡಾ. ಬಿ.ಆರ್. ಅಂಬೇಡ್ಕರ್ ಅಭಿಪ್ರಾಯವಾಗಿದೆ. ಆದ್ದರಿಂದ ಸಂವಿಧಾನದ ಮೂಲ ಆಶಯವನ್ನು ಅರಿತು ಕೆಲಸ ಮಾಡುವ ಪ್ರತಿನಿಧಿಗಳನ್ನು ಆರಿಸಿ ಕಳುಹಿಸುವುದು, ನಿರಂತರವಾಗಿ ಪ್ರಶ್ನೆ, ಸಂವಾದ ಮಾಡುತ್ತಲೇ ಜನತಂತ್ರ ವ್ಯವಸ್ಥೆಯನ್ನು ಉಳಿಸಿಕೊಳ್ಳುವುದಾಗಿದೆ. ಇದನ್ನೇ ಮಹಾತ್ಮ ಗಾಂಧೀಜಿ ಅವರು ಕೂಡ ಹೇಳಿದ್ದಾರೆ ಎಂದರು.
ದೇಶಭಕ್ತಿ ಮತ್ತು ಏಕತೆಯ ಮನೋಭಾವವು ರಾಷ್ಟ್ರದ ಒಳಿತಿಗೆ ಕೊಡುಗೆ ನೀಡಲಿ, ಸುಭದ್ರ, ಸೌಹಾರ್ದ, ಸಮೃದ್ಧ ಕರ್ನಾಟಕ ಮ್ತು ಭಾರತವನ್ನು ನಿರ್ಮಿಸಲು ಸಂವಿಧಾನದ ಶಕ್ತಿಯನ್ನು ಬಳಸಿಕೊಂಡು ಮುನ್ನಡೆಯುವ ಜತೆಗೆ ಮಾದರಿ ಗಣತತಂತ್ರ ವ್ಯವಸ್ಥೆಯನ್ನು ಸದೃಢಗೊಳಿಸೋಣವೆಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಪೊಲೀಸ್ ಮಹಾನಿರ್ದೇಶಕ ಡಾ. ಎಂ.ಎ. ಸಲೀಂ, ಜಿಲ್ಲಾಧಿಕಾರಿ ಜಿ. ಜಗದೀಶ್, ಜಿಬಿಎ ಮುಖ್ಯ ಆಯುಕ್ತ ಎಂ. ಮಹೇಶ್ವರ ರಾವ್ ಸೇರಿ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಡ್ರಗ್ಸ್ ಪಿಡುಗು ನಿಯಂತ್ರಣಕ್ಕೆ ಕಾನೂನು
ಯುವ ಜನರನ್ನು ಬಲಿ ಪಡೆಯುತ್ತಿರುವ ಡ್ರಗ್ಸ್ ಪಿಡುಗನ್ನು ಮಟ್ಟ ಹಾಕಲು ನರಹತ್ಯೆಗೆ ಸಮನಾದ ಅಪರಾಧವೆಂದು ಪರಿಗಣಿಸಿ ಶಿಕ್ಷೆ ನೀಡಲು ಕಾನೂನು ರೂಪಿಸಲಾಗುತ್ತಿರುವುದು ಉತ್ತಮ ಕಾರ್ಯವಾಗಿದೆ ಎಂದು ಪ್ರಸಂಶೆ ವ್ಯಕ್ತಪಡಿಸಿದರು.
ಗ್ಯಾರಂಟಿಯಿಂದ ಜನರಿಗೆ ಶಕ್ತಿ
ಗ್ಯಾರಂಟಿ ಯೋಜನೆಗಳಿಗೆ 1.30 ಲಕ್ಷ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನ ವಿನಿಯೋಗಿಸಲಾಗಿದೆ. ಪರಿಣಾಮ, ಜನರಿಗೆ ಕೊಳ್ಳುವ ಶಕ್ತಿ ಹೆಚ್ಚಿದೆ. ಕುಟುಂಬಗಳು ಆರ್ಥಿಕ0 ಸಾಮಾಜಿಕವಾಗಿ ಉತ್ಸಾಹ ಬಂದಿದೆ. ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಬದುಕಿನಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆಯೆಂದು ಸಮೀಕ್ಷೆಗಳಿಂದ ತಿಳಿದುಬಂದಿದೆ. ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆಗಳು ಕಾರಣವಾಗಿವೆ ಎಂದು ತಿಳಿಸಿದರು.