ರಾಜ್ಯದಲ್ಲಿ ಇನ್ನೂ 50 ಲಕ್ಷ ಜನರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ಸಿಗಬೇಕಿತ್ತು: ಆಹಾರ ಸಚಿವ ರಿಜ್ವಾನ್ ಅರ್ಷದ್-BPL card facility

ಆಹಾರ ಸಚಿವ ರಿಜ್ವಾನ್ ಅರ್ಷದ್
ಆಹಾರ ಸಚಿವ ರಿಜ್ವಾನ್ ಅರ್ಷದ್
Published on

ಬೆಂಗಳೂರು: ಹಣದುಬ್ಬರದ ಹೆಚ್ಚುತ್ತಿರುವ ನಡುವೆ ಹಳೆಯ ಬಿಪಿಎಲ್ ನಿಯಮ ಅನುಸರಿಸುವುದು ಕಷ್ಟಸಾಧ್ಯ.ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್​​​ಎಸ್‌ಎ) ಅನ್ವಯ ರಾಜ್ಯದಲ್ಲಿ ಇನ್ನೂ 50 ಲಕ್ಷ ಜನರಿಗೆ ಬಿಪಿಎಲ್ ಕಾರ್ಡ್ ಸೌಲಭ್ಯ ಸಿಗಬೇಕಿತ್ತು ಎಂದು ಆಹಾರ ಸಚಿವ ರಿಜ್ವಾನ್ ಅರ್ಷದ್ ಹೇಳಿದ್ದಾರೆ.

ಈ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗುವುದು. ಹೊಸ ಕಾರ್ಡ್ ನೀಡುವುದನ್ನು ಕೇಂದ್ರ ಸರ್ಕಾರ ನಿರ್ಬಂಧಿಸಿದೆ ಎಂದು ಸಚಿವರು ಮಾಹಿತಿ ನೀಡಿದರು.
ಪಡಿತರ ಚೀಟಿಗಳ ಪರಿಷ್ಕರಣೆ ಕಾರ್ಯವನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಮಾನದಂಡ ಉಲ್ಲಂಘಿಸಿ ಪಡೆದಿರುವ 7.65 ಲಕ್ಷ ಕಾರ್ಡ್‌ಗಳನ್ನು ಕೇಂದ್ರ ಸರ್ಕಾರವು ‘ಶಂಕಾಸ್ಪದ ಪಟ್ಟಿ’ಗೆ ಸೇರಿಸಿ ರಾಜ್ಯಕ್ಕೆ ಸಲ್ಲಿಸಿತ್ತು. ನಮ್ಮ ಇಲಾಖೆ ಅಧಿಕಾರಿಗಳು ಇವುಗಳನ್ನು ಪರಿಶೀಲಿಸಿ 3.50 ಲಕ್ಷ ಅನರ್ಹ ಕಾರ್ಡ್‌ಗಳನ್ನು ಎಪಿಎಲ್‌ಗೆ ಪರಿವರ್ತಿಸಲಾಗಿತು. ಉಳಿದ ಕಾರ್ಡ್‌ಗಳನ್ನು ಪರಿಶೀಲನೆ ಕಾರ್ಯ ನಡೆಯುತ್ತಿತ್ತು. ಆದರೆ, ಸಾರ್ವಜನಿಕರ ಹಿತ ದೃಷ್ಟಿಯಿಂದ ಕಾರ್ಡ್‌ಗಳ ಪರಿಷ್ಕರಣೆ ಕಾರ್ಯವನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ ಎಂದರು.
ಸಿಎಂ ಡಿ.ಕೆ.ಶಿವಕುಮಾರ್ ನನಗೆ ಮಹತ್ವದ ಇಲಾಖೆ ಕೊಟ್ಟಿದ್ದಾರೆ. ಬಹಳ ಸಂತಸದಿಂದ ಈ ಇಲಾಖೆಯನ್ನು ವಹಿಸಿಕೊಂಡಿದ್ದೇನೆ.ರಾಜ್ಯದ ಒಟ್ಟು ಜನಸಂಖ್ಯೆಯ ಶೇ.60 ಜನರಿಗೆ ಮುಟ್ಟುವ ಇಲಾಖೆ ಇದಾಗಿದೆ. ಬಹಳ ಆಸಕ್ತಿಯಿಂದ ಕೆಲಸ ಮಾಡಬೇಕೆಂದು ಗುರಿ ಇದೆ. ಇಲಾಖೆಯ ಇನ್ನಷ್ಟು ಸುಧಾರಣೆಗೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿ ಈ ಇಲಾಖೆಯನ್ನು ಕ್ರಿಯಾತ್ಮಕ ಇಲಾಖೆಯಾಗಿ ರೂಪಿಸಲಾಗುವುದು ಎಂದು ರಿಜ್ವಾನ್ ಅರ್ಷದ್ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net