ಮೈಲಾರ ಗ್ರಾಮದ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠದ 7ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 9ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಟ್ಟವು. ಕಾಗಿನಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ಪ್ರದೇಶ ಕುರುಬ ಸಮಾಜದ ನಿರ್ದೇಶಕ ಬಿ.ಹನುಮಂತಪ್ಪ, ಹ.ಬೋ.ಹಳ್ಳಿ ಪುರಸಭೆ ಮಾಜಿ ಅಧ್ಯಕ್ಷ ಮರಿರಾಮಣ್ಣ, ಕುರುಬ ಸಮಾಜದ ತಾಲೂಕು ಅಧ್ಯಕ್ಷ ಹೊಸ್ಕೇರಿ ಬೀರಪ್ಪ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಸೌಹಾರ್ದತೆಯಿಂದ ಜೀವನ ನಡೆಸಿ
ನಿರಂಜನಾನಂದಪುರಿ ಸ್ವಾಮೀಜಿ ಸಲಹೆ
ಹೂವಿನಹಡಗಲಿ: ಸಮಾಜದಲ್ಲಿ ಶಾಂತಿ ನೆಲೆಸಬೇಕಾದರೆ ಎಲ್ಲರೂ ವಿಶಾಲ ಮನೋಭಾವ ಹೊಂದಬೇಕಾಗಿದೆ ಎಂದು ಕಾಗಿನಲೆ ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ ಹೇಳಿದರು.
ತಾಲೂಕಿನ ಮೈಲಾರ ಗ್ರಾಮದ ಕಾಗಿನೆಲೆ ಕನಕ ಗುರುಪೀಠದ ಶಾಖಾ ಮಠದ 7ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಸಾಮೂಹಿಕ ವಿವಾಹ ಕಾರ್ಯಕ್ರಮವು ಜಾತ್ಯತೀತ ಪರಿಕಲ್ಪನೆಯಲ್ಲಿ ಆಯೋಜನೆಗೊಂಡಿದ್ದು, ಎಲ್ಲ ಜಾತಿಯ ವಧು-ವರರು ನೂತನ ದಾಂಪತ್ಯಕ್ಕೆ ಕಾಲಿಡುತ್ತಿರುವುದು ಉತ್ತಮ ಬೆಳವಣಿಗೆ. ಕಿತ್ತೂರು ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರಂತಹ ನಾಯಕರಾಗುವ ಗುಣದ ಮಕ್ಕಳನ್ನು ಈ ಸಮಾಜಕ್ಕೆ ನೀಡಬೇಕು ಎಂದರು.
ಶಾಖಾ ಗವಿಮಠದ ಡಾ.ಹಿರಿಶಾಂತವೀರ ಸ್ವಾಮೀಜಿ, ನಾಡಿನ ಮಠ, ಮಾನ್ಯಗಳಲ್ಲಿ ನಡೆಯುವ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ಬಡವರ ಮದುವೆ ಅಲ್ಲ, ಪುಣ್ಯವಂತರ, ಭಾಗ್ಯವಂತರ ಮದುವೆಯಾಗಿದೆ ಎಂದರು. ಶಾಸಕ ಕೃಷ್ಣನಾಯ್ಕ ಮಾತನಾಡಿ, ಕಾಗಿನೆಲೆ ಗುರು ಪೀಠವು ಸಮಾಜಮುಖಿ ಕೆಲಸ ಕಾರ್ಯಗಳನ್ನು ಮಾಡುತ್ತಿದೆ ಎಂದರು.
9 ಜೋಡಿ ದಾಂಪತ್ಯಕ್ಕೆ ಕಾಲಿಟ್ಟವು. ಬುಡಾ ಮಾಜಿ ಅಧ್ಯಕ್ಷ ಸಿದ್ದನಗೌಡ ಕಾರ್ಯಕ್ರಮ ಉದ್ಘಾಟಿಸಿದರು. ಮೈಲಾರಲಿಂಗೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ಪ್ರಮೋದ ಭಟ್ಟ, ಪ್ರಮುಖರಾದ ಈಟಿ ಲಿಂಗರಾಜ, ಎಂ.ಪರಮೇಶ್ವರಪ್ಪ ಇತರರಿದ್ದರು.