10ನೇ ತರಗತಿ ಪರೀಕ್ಷೆಗೆ 9 ಲಕ್ಷ ಮಕ್ಕಳು ಪರೀಕ್ಷೆ: ಸಚಿವ ಮಧು ಬಂಗಾರಪ್ಪ

ಶಾಲಾ ಶಿಕ್ಷಣ ಇಲಾಖೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಶಾಲಾ ಶಿಕ್ಷಣ ಇಲಾಖೆಯಲ್ಲಿ ಮಂಗಳವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಇದೇ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಾಖಲೆಯ 9.02 ಲಕ್ಷ ವಿದ್ಯಾರ್ಥಿಗಳು ನೋಂದಣಿ
  • 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಎಲ್ಲ ರೀತಿಯ ಸಿದ್ಧತೆ
  • ಕಳೆದ ವರ್ಷ 8.96 ಲಕ್ಷ ನೋಂದಣಿ ಮಾಡಿಕೊಂಡಿದ್ದು, ಇಲ್ಲಿಯವರೆಗಿನ ದಾಖಲೆಯಾಗಿತ್ತು
ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ನಡೆಸಲು ಸರ್ಕಾರವು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಇದೇ ಮೊದಲ ಬಾರಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ದಾಖಲೆಯ 9.02 ಲಕ್ಷ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಶಾಲಾ ಶಿಕ್ಷಣ ಇಲಾಖೆಯ ರಾಜ್ಯ ಯೋಜನಾ ನಿರ್ದೇಶಕರ ಕಚೇರಿಯಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ೆ.28ರಿಂದ ಮಾ.17ರವರೆಗೆ ದ್ವಿತೀಯ ಪಿಯುಸಿ ಮತ್ತು ಮಾ.18ರಿಂದ ಏ.2ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಲಾಗುತ್ತಿದೆ. ದ್ವಿತೀಯ ಪಿಯುಸಿಗೆ 6,46,801 ಹೊಸಬರು (್ರೆಷರ್ಸ್), 50,540 ಪುನರಾವರ್ತಿತ ಮತ್ತು 13,022 ಖಾಸಗಿ ವಿದ್ಯಾರ್ಥಿಗಳು ಸೇರಿ ಒಟ್ಟು 7,10,363 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 7.10 ಲಕ್ಷ ವಿದ್ಯಾರ್ಥಿಗಳು ಪಿಯುಸಿಗೆ ನೋಂದಣಿ ಮಾಡಿಕೊಂಡಿದ್ದರು.
ಎಸ್‌ಎಸ್‌ಎಲ್‌ಸಿಗೆ 8,12,855 ಹೊಸಬರು, 62,845 ಪುನರಾವರ್ತಿತ ಮತ್ತು 27,189 ಖಾಸಗಿ ಅಭ್ಯರ್ಥಿಗಳು ಸೇರಿ ಒಟ್ಟು 9,02,889 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಕಳೆದ ವರ್ಷ 8.96 ಲಕ್ಷ ನೋಂದಣಿ ಮಾಡಿಕೊಂಡಿದ್ದು, ಇಲ್ಲಿಯವರೆಗಿನ ದಾಖಲೆಯಾಗಿತ್ತು ಎಂದು ಹೇಳಿದರು.
5,174 ಪಿಯು ಕಾಲೇಜುಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 1,217 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ. ಹಾಗೆಯೇ, 15,941 ಶಾಲೆಗಳ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿದ್ದು, 2,871 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತಿದೆ ಎಂದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net