ಶೋಷಿತ ಮಕ್ಕಳ ನಂದಾದೀಪ

ಸುರಪುರದಲ್ಲಿ ಗುರುವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮದಿನ ಆಚರಿಸಲಾಯಿತು. ತಹಸೀಲ್ದಾರ್ ಎಚ್.ಎ.ಸರಕಾವಸ್, ಉಪನ್ಯಾಸಕ ಶರಣು ನಾಯಕ, ತಾಪಂ ಇಒ ಬಸವರಾಜ ಸಜ್ಜನ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಯಂಕಪ್ಪ ಟಣಕೇದಾರ ಇತರರಿದ್ದರು.
ಸುರಪುರದಲ್ಲಿ ಗುರುವಾರ ಆಯೋಜಿಸಿದ್ದ ಡಿ.ದೇವರಾಜ ಅರಸು ಅವರ ೧೧೧ನೇ ಜನ್ಮದಿನ ಆಚರಿಸಲಾಯಿತು. ತಹಸೀಲ್ದಾರ್ ಎಚ್.ಎ.ಸರಕಾವಸ್, ಉಪನ್ಯಾಸಕ ಶರಣು ನಾಯಕ, ತಾಪಂ ಇಒ ಬಸವರಾಜ ಸಜ್ಜನ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಯಂಕಪ್ಪ ಟಣಕೇದಾರ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಸಮಾಜಕ್ಕೆ ದೂರಗಾಮಿ ಸುಧಾರಣೆಗಳನ್ನು ತಂದ ದಕ್ಷ ನಾಯಕ
  • ಶೋಷಿತ ಮಕ್ಕಳ ನಂದಾದೀಪ

ಸುರಪುರ: ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಆಡಳಿತದ ಪ್ರಮುಖ ಭಾಗವನ್ನಾಗಿ ರೂಪಿಸಿದ ಡಿ.ದೇವರಾಜ ಅರಸು ಅವರು ದೂರದೃಷ್ಟಿಯ ನಾಯಕರಾಗಿದ್ದರು ಎಂದು ತಹಸೀಲ್ದಾರ್ ಎಚ್.ಎ.ಸರಕಾವಸ್ ಹೇಳಿದರು. ತಹಸಿಲï ಕಚೇರಿಯಲ್ಲಿ ಅರಸು ಅವರ ೧೧೧ನೇ ಜನ್ಮದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ಹಾಗೂ ಶೋಷಿತ ವರ್ಗಗಳ ಮಕ್ಕಳಿಗೆ ಶಿಕ್ಷಣದ ಅವಕಾಶ ಕಲ್ಪಿಸುವ ಉದ್ದೇಶದಿಂದ ವಸತಿ ನಿಲಯಗಳು ಮತ್ತು ವಸತಿ ಶಾಲೆಗಳ ವ್ಯವಸ್ಥೆಯನ್ನು ವಿಸ್ತರಿಸುವ ಮೂಲಕ ಬಡ ಮಕ್ಕಳ ಶಿಕ್ಷಣಕ್ಕೆ ಹೊಸ ಅವಕಾಶ ಕಲ್ಪಿಸಿದರು ಎಂದು ಹೇಳಿದರು. ಉಪನ್ಯಾಸಕ ಶರಣು ನಾಯಕ ಮಾತನಾಡಿದರು. ಈ ವೇಳೆ ವಿವಿಧ ಕ್ರೀಡೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಬಹುಮಾನ ವಿತರಿಸಲಾಯಿತು. ಎಸ್ಸೆಸ್ಸೆಲ್ಸಿ, ಪಿಯುಸಿ, ಬಿಇ ಪರೀಕ್ಷೆಗಳಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಸತಿ ನಿಲಯದ ಸಿಬ್ಬಂದಿಗೆ ಅತ್ಯುತ್ತಮ ಸೇವಾ ಪ್ರಶಸ್ತಿ ನೀಡಿ ಗೌರವಿಸಲಾಯಿತು. ತಾಪಂ ಇಒ ಬಸವರಾಜ ಸಜ್ಜನ್, ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಯಂಕಪ್ಪ ಟಣಕೇದಾರ ಇದ್ದರು. ನಿಲಯ ಪಾಲಕ ಶರಣಪ್ಪ ಸಜ್ಜನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಜೇಂದ್ರ ವಗ್ಗನ ಸ್ವಾಗತಿಸಿದರು. ಆನಂದಕುಮಾರ ನಿರೂಪಿಸಿದರು. ಮಲ್ಲಿಕಾರ್ಜುನ ನಾಯ್ಕೋಡಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net