

ಬೆಳಗಾವಿ:
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ಸಿಗಬೇಕು. ಮಹಿಳೆಯರಿಲ್ಲದ ಸಂಪುಟ ಅಪೂರ್ಣ ಎನ್ನುವುದು ನನ್ನ ಅಭಿಪ್ರಾಯ. ಹಾಗೆಂದು ನನ್ನನ್ನೇ ಸಚಿವೆಯನ್ನಾಗಿಸಬೇಕು ಎಂದು ನಾನು ಯಾರನ್ನೂ ಕೇಳಿಲ್ಲ ಎಂದು ಶಾಸಕಿ, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ ಹೇಳಿದರು.
ಕೊಡದಿದ್ದರೂ ಪಕ್ಷದ ಚೌಕಟ್ಟಿನಲ್ಲಿ ಕೆಲಸ ಮಾಡುತ್ತೇನೆ ಎಂದರು.
ರಾಜ್ಯಾಧ್ಯಕ್ಷೆ, ಶಾಸಕಿ ಹಾಗೂ ಸಚಿವೆಯಾಗಿ ಜವಾಬ್ದಾರಿ ನಿರ್ವಹಿಸಿದ್ದೇನೆ.
ಪಕ್ಷದಲ್ಲಿ ಜವಾಬ್ದಾರಿ ನೀಡುವಾಗ ಪ್ರಾದೇಶಿಕತೆ, ಸಾಮಾಜಿಕ ಸಮೀಕರಣ, ಅನುಭವ,
ಪಕ್ಷಕ್ಕೆ ಸಲ್ಲಿಸಿದ ಸೇವೆ ಸೇರಿದಂತೆ ಹಲವು ಮಾನದಂಡಗಳಿರುತ್ತವೆ. ಯಾವ ಮಾನದಂಡದಲ್ಲಿ ಯಾರಿಗೆ ಅವಕಾಶ ನೀಡಬೇಕು ಎಂಬುದು ಪಕ್ಷದ ನಿರ್ಧಾರ. ನನಗೆ ಮೂರು ವರ್ಷ ಅವಕಾಶ ಸಿಕ್ಕಿದೆ.
ಆ ಮೂರು ವರ್ಷಗಳಲ್ಲಿ ನನ್ನ ಇಲಾಖೆಯಲ್ಲಿ ಒಳ್ಳೆಯ ಕೆಲಸ ಮಾಡಿದ್ದೇನೆ ಎನ್ನುವ ತೃಪ್ತಿ ನನಗಿದೆ ಎಂದರು.