ನಗರದ ಡಾ. ಅಂಬೇಡ್ಕರ್ ಬಾಲಕರ ವಸತಿ ನಿಲಯ ಭವನದಲ್ಲಿ ಕಾರ್ಮಿಕ ಇಲಾಖೆಯಿಂದ ಆಯೋಜಿಸಿದ್ದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾರ್ಮಿಕ ಇಲಾಖೆ ನಿರೀಕ್ಷಕ ದತ್ತು ದೇವರಮನಿ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿಯು ಮಕ್ಕಳ ಬಾಲ್ಯ ಆರೋಗ್ಯ ಶಿಕ್ಷಣ ಕಸಿದುಕೊಳ್ಳುವ ಸಾಮಾಜಿಕ ಪಿಡುಗು. ಅದು ದೇಶದ ಭವಿಷ್ಯಕ್ಕೆ ಮಾರಕ, ಇದರ ನಿರ್ಮೂಲನೆಗೆ ಶಿಕ್ಷಣವೇ ಅಸವಾಗಿದ್ದು ಎಲ್ಲ ಮಕ್ಕಳು ಶಿಕ್ಷಣದ ಮುಖ್ಯ ವಾಹಿನಿಗೆ ತಂದು ಮಕ್ಕಳ ಸುಂದರ ಭವಿಷ್ಯಕ್ಕೆ ದಾರಿಯಾಗೋಣ ಎಂದರು.
ರಮಾಬಾಯಿ ಅಂಬೇಡ್ಕರ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನಿಜಣ್ಣ ಕಾಳೆ ಮಾತನಾಡಿ, ಬಾಲ ಕಾರ್ಮಿಕ ಪದ್ಧತಿಯಿಂದ ಮಕ್ಕಳ ದೈಹಿಕ ಮಾನಸಿಕ ಬೆಳವಣೆಗೆ ಸಂಪೂರ್ಣ ಕುಂಠಿತಗೊಳ್ಳುತ್ತದೆ. ಅವರು ಶಿಕ್ಷಣದಿಂದ ವಂಚಿತರಾಗುವುದರಿಂದ ಅವರ ಭವಿಷ್ಯಕ್ಕೆ ಕತ್ತಲೆಯಾಗುತ್ತದೆ. ನಾವೆಲ್ಲರೂ ಒಗ್ಗೂಡಿ ಬಾಲ ಕಾರ್ಮಿಕ ಪದ್ಧತಿಯನ್ನು ನಿರ್ಮೂಲನೆ ಮಾಡೋಣ ಎಂದರು. ಹೆಚ್ಚುವರಿ ಕಿರಿಯ ದಿವಾಣಿ ನ್ಯಾಯಾಧೀಶ ವಿಕಾಸ ದಳವಾಯಿ, ನ್ಯಾಯವಾದಿಗಳಾದ ಎಸ್.ಆರ್. ಬಿರಾದಾರ, ಅಶೋಕ ಗಜಾಕೋಶ, ಮಲ್ಲೇಶಪ್ಪ ಯಂಬತ್ನಾಳ, ಐ.ಸಿ.ಗಚ್ಚಿನಮಹಲ, ದೀಪಾ ಮೆಂಡೆಗಾರ ಮತ್ತಿತರರಿದ್ದರು.