ಯಾದಗಿರಿ: ಎಸ್ಸೆಸ್ಸೆಲ್ಸಿಯಿಂದ ಪದವಿವರೆಗಿನ ವಿದ್ಯಾರ್ಥಿಗಳು ಈ ಮೇಳದಲ್ಲಿ ಭಾಗವಹಿಸಿ ತಮ್ಮ ಪ್ರತಿಭೆ ತೊರಿಸಿ ಕೆಲಸ ಗಿಟ್ಟಿಸಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಹೇಳಿದರು. ಇಲ್ಲಿನ್ ಸರ್ಕಾರಿ ಪದವಿ ಮಹಾವಿದ್ಯಾಲಯದಲ್ಲಿ ಸೋಮವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮೇಳ ಉದ್ಘಾಟಿಸಿ ಮಾತನಾಡಿದರು. ಸರ್ಕಾರಗಳು ನಿರುದ್ಯೋಗಿಗಳಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಇಂತಹ ಮೇಳ ಆಯೋಜನೆ ಮಾಡುತ್ತಿವೆ. ಹೀಗಾಗಿ ಇದರ ಲಾಭ ನಮ್ಮ ಯುವಕರು ಪಡೆದುಕೊಳ್ಳಬೇಕು ಎಂದರು. ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ, ಯುಡಾ ಅಧ್ಯ ಬಾಬುರಾವ ಕಾಡ್ಲೂರ, ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯ ಶರಣಪ್ಪ ಸಲಾದಪುರ, ಜಿಪಂ ಸಿಇಒ ಲವೀಶ ಒರ್ಡಿಯಾ, ಜಿಲ್ಲಾ ಕೈಗಾರಿಕಾ ಅಧಿಕಾರಿ ಸತೀಶಕುಮಾರ ಇತರರಿದ್ದರು.