14ರಿಂದ 20ರವರೆಗೆ ಅದ್ದೂರಿ ಗಣೇಶೋತ್ಸವ

ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ದತೆಯನ್ನು ಶಾಸಕ ಕೆ.ಎಂ.ಉದಯ್ ಪರಿಶೀಲಿಸಿದರು. ಪಿ.ಸಂದರ್ಶ, ಮಮತಾಶಂಕರೇಗೌಡ, ಸುನಿಲ್‌ಕುಮಾರ್, ಅಪೂರ್ವಚಂದ್ರ, ರವಿ ಇದ್ದರು.
ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸಿದ್ದತೆಯನ್ನು ಶಾಸಕ ಕೆ.ಎಂ.ಉದಯ್ ಪರಿಶೀಲಿಸಿದರು. ಪಿ.ಸಂದರ್ಶ, ಮಮತಾಶಂಕರೇಗೌಡ, ಸುನಿಲ್‌ಕುಮಾರ್, ಅಪೂರ್ವಚಂದ್ರ, ರವಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಕೆ.ಎಂ.ಉದಯ್
  • ಸೆ.14ರಿಂದ 20ರವರೆಗೆ ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಗಣೇಶೋತ್ಸವ
ಮದ್ದೂರು: ಗೌರಿ-ಗಣೇಶ ಹಬ್ಬದ ಪ್ರಯುಕ್ತ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್ ಹಾಗೂ ಸಾರ್ವಜನಿಕರ ಸಹಯೋಗದಲ್ಲಿ ಸೆ.14ರಿಂದ 20ರವರೆಗೆ ಮದ್ದೂರು ತಾಲೂಕು ಕ್ರೀಡಾಂಗಣದಲ್ಲಿ ಅದ್ದೂರಿ ಗಣೇಶೋತ್ಸವ ಆಯೋಜಿಸಲಾಗಿದೆ ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.
ಗಣೇಶೋತ್ಸವ ಅಂಗವಾಗಿ ತಾಲೂಕು ಕ್ರೀಡಾಂಗಣದಲ್ಲಿ ಸಿದ್ಧತೆ ಪರಿಶೀಲಿಸಿ ಮಾತನಾಡಿದರು. ನಾಡಿನ ಸಾಂಸ್ಕೃತಿಕ ಪರಂಪರೆ ಹಾಗೂ ಭಕ್ತಿ-ಭಾವವನ್ನು ಸಾರುವ ಉದ್ದೇಶದಿಂದ ಗಣೇಶೋತ್ಸವವನ್ನು ಶಿಸ್ತುಬದ್ಧ ಹಾಗೂ ವಿಜೃಂಭಣೆಯಿಂದ ಆಚರಿಸಲು ಸಿದ್ಧತೆಗಳು ಭರದಿಂದ ಸಾಗಿವೆ ಎಂದರು.
ಉತ್ಸವಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಮೂಲಸೌಕರ್ಯ, ಸುರಕ್ಷತೆ ಹಾಗೂ ಶಿಸ್ತುಬದ್ಧ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮವಹಿಸುವಂತೆ ಕಾರ್ಯಕ್ರಮದ ಆಯೋಜಕರಿಗೆ ಸೂಚಿಸಿದರು.
ಸಾರ್ವಜನಿಕರ ಸಹಭಾಗಿತ್ವ, ಸೌಹಾರ್ದ ಹಾಗೂ ಒಗ್ಗಟ್ಟಿನ ಹಬ್ಬವಾಗಿ ಯಶಸ್ವಿಯಾಗಲು ಸರ್ವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.
ಡಿಸಿಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶಂಕರೇಗೌಡ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸುನಿಲ್ ಕುಮಾರ್, ಎಚ್.ಕೆ.ವೀರಣ್ಣಗೌಡ ಕಾಲೇಜು ಕಾರ್ಯದರ್ಶಿ ಅಪೂರ್ವ ಚಂದ್ರು, ಉದಯ್ ಚಾರಿಟಬಲ್ ಟ್ರಸ್ಟ್ ಸದಸ್ಯ ರವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net