ರೈತರಿಗಾಗಿ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸಿದ ದೇಶದ ಮೊದಲ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ರೈತರಿಗೆ ಶೂನ್ಯ ಬಡ್ಡಿದರ ಸಾಲ, ನೀರಾವರಿ ಯೋಜನೆಗಳಿಗೆ ವೇಗ, ಬೆಳೆ ಪರಿಹಾರ ವಿತರಣೆಯಲ್ಲಿ ಪಾರದರ್ಶಕತೆ ಸೇರಿದಂತೆ ಹಲವು ರೈತಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದರು. ಬಡ ಹೆಣ್ಣು ಮಕ್ಕಳಿಗಾಗಿ ಭಾಗ್ಯಲ$್ಮ ಯೋಜನೆ, ಸೆಕಲ್ ವಿತರಣೆಯಂತಹ ಅನೇಕ ಜನಪರ ಯೋಜನೆಗಳ ಮೂಲಕ ಜನಮನ ಗೆದ್ದಿದ್ದಾರೆ ಎಂದು ತಿಳಿಸಿದ್ದಾರೆ.