ಗುತ್ತಿಗೆದಾರರಿಗೆ ಲಾಭ ಮಾಡಿಕೊಡುವ ಹುನ್ನಾರ

ವಿಬಿ ಜಿ ರಾಮ್ ಜಿ ಕಾಯ್ದೆ ರದ್ದು ಮಾಡುವಂತೆ ಆಗ್ರಹಿಸಿ ಎಐಕೆಕೆಎಂಎಸ್ ನೇತೃತ್ವದಲ್ಲಿ ಕುರುಗೋಡಿನಲ್ಲಿ ತಾಪಂ ಇಒ ನಿರ್ಮಲಾಗೆ ಮನವಿ ಸಲ್ಲಿಸಲಾಯಿತು. ನರೇಗಾ ಉಳಿಸಿ ತಾಲೂಕು ಸಮಿತಿ ಅಧ್ಯಕ್ಷ ಕಲ್ಲುಕಂಬ ಪಂಪಾಪತಿ, ಉಪಾಧ್ಯಕ್ಷ ಮುಷ್ಟಗಟ್ಟ ಪಂಪನಗೌಡ, ಕಲ್ಲುಕಂಬ ಮಾರೆಪ್ಪ, ಕಾರ್ಯದರ್ಶಿ ಕೆರೆಕೆರೆ ಬಸವರಾಜ್ ಇದ್ದರು.

Published on
ಕುರುಗೋಡು: ಕೇಂದ್ರ ಸರ್ಕಾರ ವಿಬಿ ಜಿ ರಾಮ್ ಜಿ ಕಾಯ್ದೆ ರದ್ದು ಮಾಡಬೇಕೆಂದು ಒತ್ತಾಯಿಸಿ ಎಐಕೆಕೆಎಂಎಸ್ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿ ತಾಪಂ ಇಒ ನಿರ್ಮಲಾಗೆ ಮನವಿ ಸಲ್ಲಿಸಿದರು. 
ಜಿಲ್ಲಾ ಅಧ್ಯಕ್ಷ ಗೋವಿಂದ್ ಮಾತನಾಡಿ, ಕೇಂದ್ರ ಸರ್ಕಾರದ ನೂತನ ಕಾಯ್ದೆ ಬಡ ಕೂಲಿ ಕಾರ್ಮಿಕರಿಂದ ಉದ್ಯೋಗ ಕಸಿಯಲಿದೆ. ಗ್ರಾಪಂ ಅಧಿಕಾರ ಮೊಟಕುಗೊಳಿಸಿ, ಗುತ್ತಿಗೆದಾರರಿಗೆ ಲಾಭ ಮಾಡಿಕೊಡುವ ಹುನ್ನಾರ ಹೊಂದಿದೆ ಎಂದು ದೂರಿದರು.
ರಾಜ್ಯ ಸಮಿತಿ ಸದಸ್ಯ ಈ.ಹನುಮಂತಪ್ಪ ಮಾತನಾಡಿ, ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ವಿರುದ್ಧ ಆರೋಪಿಸುವ ಬದಲು ಜನರಿಗೆ ಉದ್ಯೋಗ ಒದಗಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.
ಸಂಘದ ಜಿಲ್ಲಾ ಕಾರ್ಯದರ್ಶಿ ಗುರಳ್ಳಿ ರಾಜ, ಪ್ರಮುಖರಾದ ಕೋಳೂರು ಪಂಪಾಪತಿ, ಬಸವರಾಜ್, ಮಾರೆಪ್ಪ, ಕಾಳಿಂಗಪ್ಪ , ಹನುಮಂತಪ್ಪ, ಪಂಪನಗೌಡ, ಶಿವಪ್ಪ, ರುದ್ರಮ್ಮ, ರತ್ನಮ್ಮ, ವೀರೇಶ್ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net