ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಽಕಾರಿ ಸಂಗಪ್ಪ ಮಾತನಾಡಿ, ಮಹಿಳೆಯರನ್ನು ಗೌರವಿಸುವುದು ಕೇವಲ ಕಾನೂನಿನ ಪಾಲನೆಯಲ್ಲ, ಅದು ನಮ್ಮ ಸಂಸ್ಕಾರ, ನಮ್ಮ ಮಾನವೀಯತೆ ಮತ್ತು ನಮ್ಮ ಸಾಮಾಜಿಕ ಜವಾಬ್ದಾರಿಯಾಗಿದೆ. ಪೋಶ್ ಅಽನಿಯಮದ ಮೂಲ ಆಶಯಗಳು ಮುಖ್ಯವಾಗಿ ತಡೆಗಟ್ಟುವಿಕೆ, ನಿಷೇಧ ಹಾಗೂ ಪರಿಹಾರ ಒಳಗೊಂಡಿದೆ. ಮಹಿಳೆಯರು ಆತ್ಮವಿಶ್ವಾಸದಿಂದ ಕೆಲಸ ಮಾಡಬೇಕು. ಮಹಿಳೆಯರಿಗೆ ಸುರಕ್ಷಿತ, ಗೌರವಯುತ ಮತ್ತು ಸಮಾನ ಅವಕಾಶಗಳನ್ನು ಒದಗಿಸುವ ಜಿಲ್ಲೆಯಾಗಿ ರೂಪಿಸುವ ಪ್ರಯತ್ನಕ್ಕೆ ಎಲ್ಲರೂ ಕೈಜೋಡಿಸಬೇಕಿದೆ ಎಂದರು.