ಶಾಲೆಯ ಮೊದಲ ದಿನವೇ ವಿದ್ಯಾರ್ಥಿಗಳ ಸಂಭ್ರಮ, ಪೋಷಕರ ಖುಷಿ ಹಾಗೂ ಶಾಲಾ ಆಡಳಿತ ಮಂಡಳಿಯ ವಿಶೇಷ ಸ್ವಾಗತ ಕಾರ್ಯಕ್ರಮದಿಂದ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.ಶಾಲಾ ಆವರಣವನ್ನು ಬಲೂನ್ ಮತ್ತು ಅಲಂಕಾರಿಕ ವಸ್ತುಗಳಿಂದ ಸಿಂಗರಿಸಲಾಗಿತ್ತು. ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳನ್ನು ಶಿಕ್ಷಕರು ಹಾಗೂ ಆಡಳಿತ ಮಂಡಳಿ ಸದಸ್ಯರು ಆರತಿ ಬೆಳಗಿ, ಪುಷ್ಪಾರ್ಚನೆಗೈದು, ನಂತರ ಸಿಹಿ ತಿನ್ನಿಸಿ ಆತ್ಮೀಯವಾಗಿ ಬರಮಾಡಿಕೊಂಡರು.