ಮುಖ್ಯವಾಗಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 56,432 ಹುದ್ದೆಗಳ ಭರ್ತಿ ಹಾಗೂ ನೇಮಕಾತಿ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ಘೋಷಿಸಿರುವುದು ನಾಡಿನ ಯುವಕರಿಗೆ ನೇಮಕಾತಿ ಭಾಗ್ಯ ಸಿಕ್ಕಿದಂತಾಗಿದೆ. ನಮ್ಮ ಪ್ರಾಮಾಣಿಕ ಪ್ರಯತ್ನದಿಂದಾಗಿ ಬಹುದಿನದ ಬೇಡಿಕೆಯಾಗಿದ್ದ ಹುಬ್ಬಳ್ಳಿ ಹಜ್ ಭವನದ ನಿರ್ಮಾಣ ಮಾಡುವುದಾಗಿ ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಕಿತ್ತೂರು ಕರ್ನಾಟಕದ ಬಹುದಿನಗಳ ಕನಸು ನನಸಾಗಿದೆ.